ನಾನು ಹಾಗೆ ಹೇಳೇ ಇಲ್ಲ: ದೇವೇಗೌಡರಿಂದ ಸ್ಪಷ್ಟನೆ

Prasthutha|

ಬೆಂಗಳೂರು: ಬಿಜೆಪಿ-ಜೆಡಿಎಸ್​ ಮೈತ್ರಿಯನ್ನು ಕೇರಳದಲ್ಲಿ ಸಿಪಿಐಎಂ ಬೆಂಬಲಿಸುತ್ತದೆ ಎಂದು ನಾನು ಹೇಳೇ ಇಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಸಿಪಿಐಎಂ ಕುರಿತ ನನ್ನ ಹೇಳಿಕೆಯೊಂದಕ್ಕೆ ಸಂಬಂಧಿಸಿದಂತೆ ಗೊಂದಲವೊಂದು ಉಂಟಾಗಿದೆ. ನಾನು ಯಾವ ಅರ್ಥದಲ್ಲಿ ಮಾತನಾಡಿದ್ದೇನೆ ಎಂಬುದನ್ನು ನನ್ನ ಕಮ್ಯುನಿಷ್ಟ್ ಗೆಳೆಯರು ಅರ್ಥ ಮಾಡಿಕೊಂಡಂತಿಲ್ಲ ಎಂದಿದ್ದಾರೆ.

- Advertisement -

ನನ್ನ ಹೇಳಿಕೆಯೊಂದನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ಆ ರೀತಿ ನಾನು ಹೇಳೇ ಇಲ್ಲ ಎಂದು ಹೇಳಿರುವ ದೇವೇಗೌಡರು, ತಾವು ಹೇಳಿದ್ದೇನು ಎಂಬುದನ್ನೂ ಸ್ಪಷ್ಟಪಡಿಸಿದ್ದಾರೆ. ಬಿಜೆಪಿಯೊಂದಿಗಿನ ನಮ್ಮ ಮೈತ್ರಿ ನಂತರ ಕರ್ನಾಟಕದ ಹೊರಗಿನ ನನ್ನ ಪಕ್ಷದ ಘಟಕಗಳಲ್ಲಿನ ವಿಷಯಗಳು ಇತ್ಯರ್ಥವಾಗದ ಕಾರಣ ಕೇರಳದಲ್ಲಿ ನನ್ನ ಪಕ್ಷದ ಘಟಕವು ಎಲ್‌ಡಿಎಫ್ ಸರ್ಕಾರದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ ಎಂದಷ್ಟೇ ನಾನು ಹೇಳಿದ್ದೇನೆ ಎಂಬುದಾಗಿ ದೇವೇಗೌಡರು ಸ್ಪಷ್ಟನೆ ನೀಡಿದ್ದಾರೆ.

ಈ ಮೂಲಕ ಕೇರಳದವರಿಗೆ ಒಂದು ವಿಷಯಕ್ಕೆ ಸಂಬಂಧಿಸಿದಂತೆ ಆಗಿರುವ ಗೊಂದಲವನ್ನು ನಿವಾರಿಸಲು ಯತ್ನಿಸಿದ್ದಾರೆ.