ಮಹಿಳೆಯರನ್ನ ಅವಮಾನಿಸಿಲ್ಲ, ನನ್ನ ಹೇಳಿಕೆಯಿಂದ ತಾಯಂದಿರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವೆ: ಎಚ್ ಡಿಕೆ

Prasthutha|

ಬೆಂಗಳೂರು: ಯಾವುದೇ ಮಹಿಳೆಯರನ್ನೂ ನಾನು ಅವಮಾನಿಸಿಲ್ಲ. ಆದರೂ, ನನ್ನ ಹೇಳಿಕೆಯಿಂದ ರಾಜ್ಯದ ತಾಯಂದಿರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

- Advertisement -


ಪಕ್ಷದ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ʼನಾನು ಚುನಾವಣಾ ಪ್ರಚಾರ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಮಾತನಾಡಿದ್ದೇನೆಯೇ ಹೊರತು ಮಹಿಳೆಯರನ್ನು ಅವಮಾನ ಮಾಡಿಲ್ಲ. ಗ್ಯಾರಂಟಿ ಯೋಜನೆಗಳಿಗೆ ಮಾರುಹೋಗಿ ಮಹಿಳೆಯರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದರಿಂದ ರಾಜ್ಯದ ಸಂಪತ್ತಿನ ಲೂಟಿ ಮತ್ತು ಸಾಲದ ಹೊರೆ ಹೆಚ್ಚಳ ಆಗಿರುವ ಕುರಿತು ಎಚ್ಚರಿಸಿದ್ದೆ. ಅದನ್ನು ತಪ್ಪಾಗಿ ಬಿಂಬಿಸಲಾಗಿದೆʼ ಎಂದರು.


2,000 ಕೊಟ್ಟು ದುಡಿಯುವ ಜನರಿಂದ 5,000 ಕಿಸೆಗಳವು ಮಾಡುತ್ತಾರೆ ಎಂಬುದನ್ನು ಹೇಳಿದ್ದೆ. ಮಹಿಳೆಯರನ್ನು ಗೌರವಿಸಿ ಸಾರಾಯಿ ನಿಷೇಧ ಮಾಡಿದ್ದೆ. ಕೋಟಿಗಟ್ಟಲೆ ಆಮಿಷ ಒಡ್ಡಿದ್ದರು. ಕಾಲಲ್ಲಿ ಒದ್ದು ಸಾರಾಯಿ ನಿಷೇಧ ಮಾಡಿದ್ದೆ ಎಂದು ಹೇಳಿದರು.

- Advertisement -


ಮಹಿಳೆಯರ ಕುರಿತು ಎಲ್ಲಿಯೂ ಅವಮಾನಕರ ಪದಗಳನ್ನು ಬಳಸಿಲ್ಲ. ತಾಯಂದಿರು ಎಂಬ ಗೌರವಸೂಚಕ ಪದವನ್ನು ಬಳಸಿಯೇ ಮಾತನಾಡಿದ್ದೇನೆ. ದಾರಿ ತಪ್ಪಿದ್ದಾರೆ ಎಂಬುದು ಅಶ್ಲೀಲ ಪದವಲ್ಲ. ಮನೆಯಲ್ಲಿ ಮಕ್ಕಳಿಗೆ ದಾರಿ ತಪ್ಪಬೇಡಿ ಎಂದು ಹೇಳುವುದಿಲ್ಲವೆ? ಅದು ಹೇಗೆ ತಪ್ಪಾಗುತ್ತದೆ ಎಂದು ಕೇಳಿದರು.

Join Whatsapp