ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ ಕಾಂಗ್ರೆಸ್ನಲ್ಲಿ ಪೈಪೋಟಿ ನಡೆಯುತ್ತಿರುವ ನಡುವೆಯೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಇಂದು ನನ್ನ ಹುಟ್ಟುಹಬ್ಬ. ಗುರುಗಳನ್ನು ಭೇಟಿ ಮಾಡಬೇಕು. ನನ್ನ ಖಾಸಗಿ ಕಾರ್ಯಕ್ರಮ ಮುಗಿಸಿ ದೆಹಲಿಗೆ ಹೋಗುತ್ತೇನೆ. ನಾನು ಯಾರ ಸಂಖ್ಯಾಬಲದ ಬಗ್ಗೆಯೂ ಮಾತನಾಡಲು ಹೋಗುವುದಿಲ್ಲ. ಕಾಂಗ್ರೆಸ್ ಪಕ್ಷ 135 ಸ್ಥಾನಗಳನ್ನು ಹೊಂದಿದೆ. ನನ್ನ ಅಧ್ಯಕ್ಷ ಸ್ಥಾನದಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದಿದೆ ಎಂದು ಹೇಳಿದ್ದಾರೆ.
ನಿನ್ನೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಒಂದು ನಿರ್ಣಯ ಅಂಗೀಕರಿಸಿದ್ದೇವೆ. ಕೆಪಿಸಿಸಿ ಅಧ್ಯಕ್ಷನಾದ ನನಗೆ ಸೋನಿಯಾ ಗಾಂಧಿ ಭರವಸೆ ನೀಡಿದ್ದಾರೆ. ನಾನೊಬ್ಬ ಏಕಾಂಗಿ, ಏಕಾಂಗಿಯಾಗಿಯೋ ಹೋರಾಟ ಮಾಡಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ನಾನು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತು ಕೊಟ್ಟಿದ್ದೆ. ಪಕ್ಷ ಅಧಿಕಾರಕ್ಕೆ ತರುತ್ತೇನೆ ಎಂದು ಮಾತುಕೊಟ್ಟಿದ್ದೆ. ಯಾರ ಕ್ಲೇಮ್ ಬಗ್ಗೆಯೂ ಮಾತಾಡಲ್ಲ, ನಾನು ಸಿಂಗಲ್ ಮ್ಯಾನ್. ನಾನು ದೈರ್ಯದಲ್ಲಿ ವಿಶ್ವಾಸದಲ್ಲಿ ನಂಬಿಕೆಯಿಟ್ಟವನು. ಹಿಂದಿನ ಐದು ವರ್ಷಗಳಲ್ಲಿ ಏನಾಗಿದೆ ಎಂದು ಬಾಯಿ ಬಿಡುವುದಿಲ್ಲ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಹೇಳುತ್ತೇನೆ. ನಾನು ಸಿಂಗಲ್ ಮ್ಯಾನ್. ಗಾಂಧಿ ಒಂದು ಮಾತು ಹೇಳಿದ್ರು. ಸೋತಾಗ ದೈರ್ಯದಿಂದ ಇರಬೇಕು, ಗೆದ್ದಾಗ ಉದಾರ ಮನಸ್ಸಿನಿಂದ ಇರಬೇಕು. 15 ಜನ ಶಾಸಕರು ಪಕ್ಷ ಬಿಟ್ಟು ಹೋದಾದ ಬೇಸರ ಆಗಿಲ್ಲ. ಆ ಸಂದರ್ಭದಲ್ಲಿ ಧೈರ್ಯದಿಂದ ಇದ್ದೆ. ಖರ್ಗೆ ಅವರಿಗೆ ರಾಜ್ಯ ರಾಜಕಾರಣದ ಬಗ್ಗೆ ಅಧಿಕಾರ ಇದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರ ಬಗ್ಗೆ ವಿಶ್ವಾಸ ಇದೆ. ಈ ವಿಚಾರವನ್ನು ಅವರಿಗೆ ಬಿಡುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.