Home ಟಾಪ್ ಸುದ್ದಿಗಳು ಬೆಂಗಳೂರಿನಲ್ಲಿ ಮತ್ತೆ 10ಕ್ಕೂ ಹೆಚ್ಚು ಕಡೆ ಐಟಿ ದಾಳಿ

ಬೆಂಗಳೂರಿನಲ್ಲಿ ಮತ್ತೆ 10ಕ್ಕೂ ಹೆಚ್ಚು ಕಡೆ ಐಟಿ ದಾಳಿ

ಬೆಂಗಳೂರು: ತೆರಿಗೆ ವಂಚನೆ ಸಂಬಂಧ ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಮಲ್ಲೇಶ್ವರಂ, ಸದಾಶಿವನಗರ, ಡಾಲರ್ಸ್ ಕಾಲೋನಿ, ಮತ್ತಿಕೆರೆ, ಸರ್ಜಾಪುರ ರಸ್ತೆ ಸೇರಿದಂತೆ 10ಕ್ಕೂ ಹೆಚ್ಚು ಕಡೆ ಚಿನ್ನದ ವ್ಯಾಪಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು ದಾಖಲೆ ಪತ್ರವನ್ನು ಪರಿಶೀಲನೆ ನಡೆಸಿದ್ದಾರೆ.

ತೆರಿಗೆ ವಂಚನೆ ಸಂಬಂಧ ಕಳೆದ ವಾರ ಚಿನ್ನದ ವ್ಯಾಪಾರಿಗಳ ಮೇಲೆ ದಾಳಿ ನಡೆದಿತ್ತು. ದಾಳಿ ವೇಳೆ ಪತ್ತೆಯಾದ ಹಲವಾರು ದಾಖಲಾತಿ ಆಧಾರದ ಮೇಲೆ ಐಟಿ ಅಧಿಕಾರಿಗಳು ಮತ್ತೆ ದಾಳಿ ಮಾಡಿದ್ದಾರೆ.

Join Whatsapp
Exit mobile version