ನವದೆಹಲಿ: ಇತ್ತೀಚೆಗೆ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಎಂಬ ಸಾಕ್ಷ್ಯಚಿತ್ರ ಬಿಡುಗಡೆಗೊಳಿಸಿದ್ದ ಬಿಬಿಸಿ ಸಂಸ್ಥೆಯ ದೆಹಲಿ, ಮುಂಬೈಯಲ್ಲಿರುವ ಕಚೇರಿಗಳಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ದಾಖಲೆಗಳ ಪರಿಶೀಲನೆ ನಡೆಸಿರುವ ಅಧಿಕಾರಿಗಳು, ಕೆಲವು ಸಿಬ್ಬಂದಿಯನ್ನು ವಿಚಾರಣೆ ನಡೆಸಿದ್ದಾರೆ. 2002ರ ಗುಜರಾತ್ ಗಲಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರದ ಕುರಿತು ಬೆಳಕು ಚೆಲ್ಲಿತ್ತು.
2002ರ ಗುಜರಾತ್ ಗಲಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರದ ಕುರಿತು ಬಿಬಿಸಿಯು ಇತ್ತೀಚೆಗೆ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಎಂಬ ಸಾಕ್ಷ್ಯಚಿತ್ರ ಬಿಡುಗಡೆಗೊಳಿಸಿತ್ತು. ದೇಶದಲ್ಲಿ ಅದರ ಪ್ರಸಾರಕ್ಕೆ ನಿಷೇಧ ಹೇರಲಾಗಿತ್ತು.