ಬಿಜೆಪಿ ಅಭ್ಯರ್ಥಿ ಸುಧಾಕರ್ ಆಪ್ತನ ಮನೆ ಮೇಲೆ ಐಟಿ ದಾಳಿ: ಕೋಟ್ಯಾಂತರ ರೂ. ಹಣ ಪತ್ತೆ

Prasthutha|

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಆಪ್ತ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಮಾದಾವರ ಗೋವಿಂದಪ್ಪ ನಿವಾಸದ ಮೇಲೆ ಐಟಿ ದಾಳಿಯಾಗಿದೆ.

- Advertisement -

ಗೋವಿಂದಪ್ಪನವರ ನೆಲಮಂಗಲದ ಮನೆಯಲ್ಲಿ ಹಣ ಇದೆ ಎಂದು ಮಾಹಿತಿ ತಿಳಿಯುತ್ತಿದ್ದಂತೆಯೇ ಐಟಿ ಅಧಿಕಾರಿಗಳು ಇಂದು(ಏಪ್ರಿಲ್ 25) ದಾಳಿ ಮಾಡಿದ್ದಾರೆ. 10ಜನ ಐಟಿ ಅಧಿಕಾರಿಗಳು ಮನೆಯ ಇಂಚಿಂಚು ಪರಿಶೀಲನೆ ಮಾಡಿದ್ದು, ಈ ವೇಳೆ ಕೋಟ್ಯಾಂತರ ರೂಪಾಯಿ ನಗದು ಪತ್ತೆಯಾಗಿದೆ.

Join Whatsapp