ಡಿಕೆ ಸುರೇಶ್ ಆಪ್ತನ ಮನೆ ಮೇಲೆ ಐಟಿ ದಾಳಿ: ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

Prasthutha|

ಬೆಂಗಳೂರು: ಡಿಕೆ ಸುರೇಶ್ ಆಪ್ತ ಹಾಗೂ ಕೋಣನಕುಂಟೆ ಬ್ಲಾಕ್ ಮಾಜಿ ಕಾರ್ಪೊರೇಟರ್ ಗಂಗಾಧರ್ ಎಂಬುವವರ ಮನೆ ಸೇರಿದಂತೆ ಒಟ್ಟು ಆರು ಕಡೆಗಳಲ್ಲಿ ಇಂದು(ಏ.24) ಬೆಳಿಗ್ಗೆ 8 ರಿಂದ 10 ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

- Advertisement -


ಸತತ 8 ಗಂಟೆಯಿಂದ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ಇನ್ನು ಈ ಕುರಿತು ವಿಷಯ ತಿಳಿಯುತ್ತಿದ್ದಂತೆ ಮಾಜಿ ಕಾರ್ಪೊರೇಟರ್ ಗಂಗಾಧರ್ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿ ಧರಣಿ ನಡೆಸಿದ್ದಾರೆ.


ಜೊತೆಗೆ ಡಿಕೆ ಸುರೇಶ್ ಅವರನ್ನು ಟಾರ್ಗೆಟ್ ಮಾಡಿ ಅವರ ಆಪ್ತರ ಮೇಲೆ ಐಟಿ ದಾಳಿ ಮಾಡುತ್ತಿದ್ದಾರೆ ಎಂದು ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ.

Join Whatsapp