ತಮಿಳುನಾಡಿನ ಸಚಿವ ಸೆಂಥಿಲ್ ಬಾಲಾಜಿ ನಿವಾಸದ ಮೇಲೆ ಐಟಿ ದಾಳಿ

Prasthutha|

ಚೆನ್ನೈ: ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿಗೆ ಸಂಬಂಧಿಸಿದ ವಿವಿಧ ಸ್ಥಳಗಳಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಶುಕ್ರವಾರ ಸಂಘಟಿತ ಶೋಧಗಳನ್ನು ಪ್ರಾರಂಭಿಸಿದ್ದಾರೆ.


ಕರೂರ್ ಮತ್ತು ಕೊಯಮತ್ತೂರು ಸೇರಿದಂತೆ ನಗರಗಳಲ್ಲಿ ಸಚಿವರೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಗಳ ಆವರಣದಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿದೆ.
ತೆರಿಗೆ ಅಧಿಕಾರಿಗಳು ತಪಾಸಣೆ ನಡೆಸುತ್ತಿರುವವರಲ್ಲಿ ಸಚಿವರ ನಿಕಟ ಸಂಬಂಧಿಗಳು ಮತ್ತು ಕೆಲವು ಗುತ್ತಿಗೆದಾರರು ಇದ್ದಾರೆ ಎಂದು ವರದಿಯಾಗಿದೆ.

- Advertisement -