ನನಗೂ ನನ್ನ ಮಗನಿಗೂ ಭವಿಷ್ಯ ಇಲ್ಲ ಅಂತಾ ಗೊತ್ತಿದ್ದೇ ಈ ನಿರ್ಧಾರ ಮಾಡಿದ್ದೇನೆ: ಈಶ್ವರಪ್ಪ

Prasthutha|

ಶಿವಮೊಗ್ಗ: ನನಗೂ ನನ್ನ ಮಗನಿಗೂ ಭವಿಷ್ಯ ಇಲ್ಲ ಅಂತಾ ಗೊತ್ತಿದ್ದೇ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಹೇಳಿದರು.

- Advertisement -


ನಗರದಲ್ಲಿ ಮಾತನಾಡಿದ ಅವರು, ಆರಂಭದಲ್ಲಿ ಅನೇಕರು ಹೇಳಿದ್ರು, ಬೇಡ ಸರ್ ಬಹಳ ದೊಡ್ಡ ಸಾಹಸಕ್ಕೆ ಕೈ ಹಾಕ್ತಿದ್ದೀರಾ. ನಿಮಗೂ ಭವಿಷ್ಯ ಇರಲ್ಲ, ನಿಮ್ಮ ಮಗನಿಗೂ ಭವಿಷ್ಯ ಇರಲ್ಲ ಅಂದ್ರು. ನಾನು ನನ್ನ ಮಗನ ಜೊತೆ ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಂಡಿದ್ದೇನೆ. ನನಗೂ ನನ್ನ ಮಗನಿಗೂ ಭವಿಷ್ಯ ಇಲ್ಲ ಅಂತಾ ಗೊತ್ತಿದ್ದೇ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ತಿಳಿಸಿದರು.


ರಾಮನ ಆದರ್ಶ ಇಟ್ಟುಕೊಂಡು ನರೇಂದ್ರ ಮೋದಿ ಭಾರತದ ಸಂಸ್ಕೃತಿಯನ್ನು ವಿಶ್ವದಾದ್ಯಂತ ಹರಡಲು ಪೂರ್ಣ ಸಹಕಾರ ಕೊಡುತ್ತಿದ್ದಾರೆ. ನರೇಂದ್ರ ಮೋದಿ ಆಡಳಿತವನ್ನು ಪ್ರಪಂಚವೇ ಮೆಚ್ಚುತ್ತಿದೆ. ವಿಶ್ವ ಶಾಂತಿಗೆ ನಾಂದಿ ಆಗುತ್ತದೆ ಎಂದರು.



Join Whatsapp