ಹುಬ್ಬಳ್ಳಿ: ಹಾಸನ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅವರ ಮನೆಯಲ್ಲಿ ನಡೆದಿದ್ದ ವಿಚಾರವನ್ನು ಹೊರಗಡೆ ತರುತ್ತೇನೆ ಎಂದು ರಾಕೇಶ್ ಸಿದ್ದರಾಮಯ್ಯ ಸಾವಿನ ಸಂದರ್ಭದಲ್ಲಿ ನಡೆದ ವಿಚಾರವನ್ನು ಎಚ್ಡಿಕೆ ಎಳೆದು ತಂದಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದಲ್ಲಿ ನಡೆದಿದ್ದ ಘಟನೆಗೆ ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ ಅವರು ಯಾವ ರೀತಿ ಸಹಾಯ ಮಾಡಿದ್ದಾರೆ ಎಂಬುದನ್ನು ಮರೆತಿದ್ದೀರಿ. ಎಲ್ಲ ದಾಖಲೆಗಳನ್ನು ನಾವು ಹೊರಗಡೆ ತರುತ್ತೇವೆ. ನಿಮ್ಮ ಕುಟುಂಬದಲ್ಲಿ ನಡೆದ ಘಟನೆ ಏನೇನಾಯಿತು ಎಲ್ಲವೂ ಹೊರಗೆ ಬರಲಿದೆ ಎಂದು ಎಚ್ಚರಿಕೆ ನೀಡಿದರು.
ನಮ್ಮ ಮನೆಯ ಎದುರು ಏಕೆ ಪ್ರತಿಭಟನೆ ಮಾಡುತ್ತೀರಿ. ಇದನ್ನು ಇಷ್ಟಕ್ಕೆ ಬಿಡಲ್ಲ. ಎಲ್ಲ ವಿಷಯವೂ ತನಿಖೆಯಾಗಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ಕಾಂಗ್ರೆಸ್ನವರು ನಮ್ಮ ಮನೆ ಬಳಿ ಬಂದು ಪ್ರತಿಭಟಿಸುತ್ತಿದ್ದಾರೆ. ಮಹಾನುಭಾವನ ಮನೆ ಮುಂದೆ ಹೋಗಿ ಪ್ರತಿಭಟನೆ ಮಾಡಿ. ಡಿಸಿಎಂ ಡಿ.ಕೆ. ಶಿವಕುಮಾರ್ ಮನೆ ಬಳಿ ಹೋಗಿ ಪ್ರತಿಭಟನೆ ಮಾಡಿ. ಎಚ್.ಡಿ. ರೇವಣ್ಣ ಕುಟುಂಬದ ಬಗ್ಗೆ ವಿಷಯವನ್ನು ಕೆದಕಿದ್ದಾರೆ.
ನಾನು ಚರ್ಚೆ ಮಾಡಲು ಸಿದ್ಧ. ಪಲಾಯಾನ ಮಾಡುವುದಿಲ್ಲ. ಕಾಂಗ್ರೆಸ್ ನಾಯಕ ಮಹಾಪರಾಧ ಮಾಡಿದ್ದಾನೆ. ಎಷ್ಟು ತಿಂಗಳ ಹಿಂದೆ ಆ ಮಹಾನ್ ನಾಯಕನಿಗೆ ಗೊತ್ತಿತ್ತು. ಪೆನ್ಡ್ರೈವ್ ಯಾರು ಸರಬರಾಜು ಮಾಡಿದರು ಎಲ್ಲವೂ ಗೊತ್ತಿದೆ. ಈ ಮಹಾನ್ ನಾಯಕನ ನಡವಳಿಕೆಯ ಬಗ್ಗೆಯೂ ಚರ್ಚಿಸೋಣ. ನಿನ್ನೆ ಹಾಸನ ಜಿಲ್ಲಾಧಿಕಾರಿ ಹೇಳಿಕೆಯನ್ನು ನಾನು ಗಮನಿಸಿದ್ದೇನೆ. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸರ್ಕಾರದ ಹುನ್ನಾರ ಅಡಗಿದೆ ಎಂದು ಕುಮಾರ ಸ್ವಾಮಿ ಕಿಡಿಗಾರಿದ್ದಾರೆ.