ಹಾಸನ: ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಮುಂದಿನ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ತಾನೇ ಎಂಬುದಾಗಿ ಜಿಪಂ ಮಾಜಿ ಸದಸ್ಯೆ ಭವಾನಿ ರೇವಣ್ಣ ಸ್ವಯಂ ಘೋಷಣೆ ಮಾಡಿದ್ದಾರೆ.
ಹಾಸನ ತಾಲೂಕಿನ ಸಾಲಗಾಮೆ ಬಳಿ ನಡೆದ ಅಣ್ಣಪ್ಪ ಸ್ವಾಮಿ ದೇವಾಲಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ನನ್ನ ಪತಿ ಎಚ್.ಡಿ ರೇವಣ್ಣ ಅವರು ಮಂತ್ರಿಯಾಗಿದ್ದಾಗ ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಕಳೆದ ಬಾರಿ ಹಾಸನ ವಿಧಾನಸಭಾ ಕ್ಷೇತ್ರ ಬಿಜೆಪಿ ಪಾಲಾಗಿದ್ದರಿಂದ ಇನ್ನು ಸಾಕಷ್ಟು ಕೆಲಸ ಕಾರ್ಯಗಳು ಹಾಗೆಯೇ ಉಳಿದುಕೊಂಡಿದೆ. ಅದನ್ನು ಈ ಬಾರಿ ಸಂಪೂರ್ಣಗೊಳಿಸುವ ಕೆಲಸವನ್ನು ನಾವು ಮಾಡುತ್ತೇವೆ ಮತ್ತು ಈ ಬಾರಿ ಹಾಸನದಲ್ಲಿ ಮತ್ತೆ ಜೆಡಿಎಸ್ ಬರಲಿದೆ ಎಂದು ಭವಾನಿ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜನರ ಪರಿಚಯ ಇದ್ದರೆ, ಊರಿನ ಪರಿಚಯ ಆಗುತ್ತದೆ. ಮುಂದಿನ ದಿನಗಳಲ್ಲಿ ಕೆಲಸ ಮಾಡಲು ನನಗೂ ಒಳ್ಳೆಯದು, ಅನುಕೂಲ ಆಗಲಿದೆ. ಅದಕ್ಕಾಗಿ ಕ್ಷೇತ್ರ ಪ್ರವಾಸ ಮಾಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಜನರ ಕೆಲಸ ಮಾಡಲು, ಭಗವಂತ ನನಗೆ ಆಶೀರ್ವಾದ ಮಾಡಲಿ ಎಂದು ಬೇಡುವೆ ಎಂದರು.