ಹೊಸಪೇಟೆ: ನಾನೇ ಸಿಎಂ ಆಗಿ ಮುಂದುವರೆಯುವೆ ಎಂದು ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಬಗ್ಗೆ ಯಾರೂ ಅಭಿಪ್ರಾಯ ಹೇಳಬಾರದು ಎಂದು ಕಾಂಗ್ರೆಸ್ ಉಸ್ತುವಾರಿ ಖಡಕ್ ಎಚ್ಚರಿಕೆ ನೀಡಿದ ಒಂದು ದಿನದ ನಂತರ ಸಿದ್ದರಾಮಯ್ಯ, ನಾನೇ ಸಿಎಂ ಆಗಿ ಮುಂದುವರೆಯುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು ಹೊಸ ಚರ್ಚೆಗೆ ಕಾರಣವಾಗಬಹುದೆಂದು ಅಂದಾಜಿಸಲಾಗಿದೆ.
ವಿಜಯನಗರ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಗು ಹೊಸಪೇಟೆಗೆ ಆಗಮಿಸಿದ್ದ ಸಿಎಂ ಸಸುದ್ದಿಗಾರರೊಂದಿಗೆ ಮಾತಾಡಿದರು. , ಐದು ವರ್ಷ ನೀವೇನಾ ಸಿಎಂ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಐದು ವರ್ಷ ನಮ್ಮದೆ ಸರ್ಕಾರ ಇರುತ್ತದೆ. ನಾನು ಈಗ ಮುಖ್ಯಮಂತ್ರಿ. ನಾನೇ ಮುಂದುವರಿಯುವೆ ಎಂದರು.
ಬಿಜೆಪಿಗರು ಭ್ರಮನಿರಶನಗೊಂಡಿದ್ದಾರೆ. ಅವರಿಗೆ ಅಧಿಕಾರ ಇಲ್ಲದೆ ಇರಲು ಆಗುವುದಿಲ್ಲ. ಮತ್ತೆ ಆಪರೇಷನ್ ಮಾಡಲು ಪ್ರಯತ್ನ ಮಾಡ್ತಾರೆ. ಅದು ಸಾಧ್ಯವಾಗಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. .
ಸಚಿವರಾದ ಝಮೀರ್ ಅಹಮ್ಮದ್ ಖಾನ್, ಶಿವರಾಜ್ ತಂಗಡಗಿ, ಭೈರತಿ ಸುರೇಶ್, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್, ಪಕ್ಷೇತರ ಶಾಸಕಿ ಎಂ.ಪಿ.ಲತಾ ಇತರರಿದ್ದರು.
ಸಿಎಂ ಸಿದ್ದರಾಮಯ್ಯ ಅವರನ್ನು ಮಕ್ಕಳು ಗುಲಾಬಿ ಹೂ ನೀಡಿ ಸ್ವಾಗತಿಸಿದ್ದು ವಿಶೇಷವಾಗಿತ್ತು.