ಶಿವಮೊಗ್ಗ: ಶಿವಮೊಗ್ಗ ಲೋಕಸಭ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಎಪ್ರಿಲ್ 12 ರಂದು 25 ಸಾವಿರ ಕಾರ್ಯಕರ್ತರೊಂದಿಗೆ ನಾನು ನಾಮಪತ್ರ ಸಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಇಂದು ನಗರದ ಶುಭಮಂಗಳ ಕಲ್ಯಾಣ ಮಂದಿರದಲ್ಲಿ ನಡೆದ ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಈ ಘೋಷಣೆ ಮಾಡಿದ್ದಾರೆ.
ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ನನ್ನ ಗುರುತು ಕೂಡ ಇನ್ನೂ ತೀರ್ಮಾನವಾಗಿಲ್ಲ. ಮತದಾನದ ದಿನಾಂಕ ನಿಗದಿಯಾಗಿದೆ. ಆದ್ದರಿಂದ ಏಪ್ರಿಲ್ 12ರಂದು ಸಾವಿರಾರು ಕಾರ್ಯಕರ್ತರೊಂದಿಗೆ ತೆರಳಿ ನಾಮಪತ್ರ ಸಲ್ಲಿಸುವೆ ಎಂದ ಈಶ್ವರಪ್ಪ ಈ ರೀತಿ ಘೋಷಿಸಿದಾಗ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಎದೆಯಲ್ಲಿ ನಡುಕ ಆರಂಭವಾಗುತ್ತದೆ. ಶಕ್ತಿ ಪ್ರದರ್ಶನಕ್ಕೆ ಇಳಿದಾಗಿದೆ ಎಂದು ಹೇಳಿದ್ದಾರೆ.