ಬೆಂಗಳೂರು: ಹೈವೋಲ್ಟೇಜೂ ಕೊಡ್ತಿನಿ, ಲೋವೋಲ್ಟೇಜೂ ಕೊಡ್ತಿನಿ, ನಕಲಿಗೂ ಕೊಡುವೆ, ಲೂಟಿಗೂ ಕೊಡುವೆ, ಸ್ವಲ್ಪ ತಾಳ್ಮೆಯಿಂದ ಕಾಯಿರಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಸೋಮವಾರ ಅವರು ಪ್ರತಿಕ್ರಿಯೆ ನೀಡಿದರು. ಬಿಜೆಪಿಯವರು ಪ್ರತಿಭಟನೆ ಮಾಡಬೇಕು, ಪ್ರತಿಭಟನೆ ಮಾಡಿದರೆ ಜನರಿಗೆ ಅವರ ಎಲ್ಲಾ ತರಹದ ಲೂಟಿ ಬಗ್ಗೆ ಗೊತ್ತಾಗುತ್ತದೆ, ಎಲ್ಲವನ್ನೂ ಬಿಚ್ಚಿಡುತ್ತೇವೆ ಎಂದು ಹೇಳಿದರು.