Home ಟಾಪ್ ಸುದ್ದಿಗಳು ಶಿವಮೊಗ್ಗದಿಂದ ಗೆದ್ದು ಮತ್ತೆ ಬಿಜೆಪಿಗೆ ಹೋಗುತ್ತೇನೆ: ಈಶ್ವರಪ್ಪ

ಶಿವಮೊಗ್ಗದಿಂದ ಗೆದ್ದು ಮತ್ತೆ ಬಿಜೆಪಿಗೆ ಹೋಗುತ್ತೇನೆ: ಈಶ್ವರಪ್ಪ

ಸಾಗರ: ನಾನು ಬಿಜೆಪಿಯ ಮೂಲ ಕಾರ್ಯಕರ್ತನಾಗಿದ್ದೂ ಲೋಕಸಭಾ ಚುನಾವಣೆ ಸಂದರ್ಭದ ಈ ಎರಡು ತಿಂಗಳು ಮಾತ್ರ ನಾನು ಬಿಜೆಪಿಯಲ್ಲಿ ಇಲ್ಲ ಎನ್ನುವ ನೋವು ಇದೆ. ಆದರೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಗೆದ್ದು ಮತ್ತೆ ಬಿಜೆಪಿಗೆ ಹೋಗುತ್ತೇನೆ ಎಂದು ಮಾಜಿ ಸಚಿವ, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಘೋಷಿಸಿಕೊಂಡಿರುವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ನಲವತ್ತು ವರ್ಷಗಳಿಂದ ಬಿಜೆಪಿಯಲ್ಲಿ ನಾನು ನಿಷ್ಠೆಯಿಂದ ಕೆಲಸ ಮಾಡಿದ್ದೇನೆ. ನನಗೇ ಅನ್ಯಾಯ ಆಗಬಹುದಾ ಹೇಳಿ. ಕಾಂಗ್ರೆಸ್‌ನಲ್ಲಿದ್ದ ಜಗದೀಶ್ ಶೆಟ್ಟರ್ ಮನೆಗೆ ಹೋಗಿ ಬಿಜೆಪಿಗೆ ಕರೆತಂದು ಟಿಕೆಟ್ ಕೊಡುತ್ತಾರೆ. ನಾವು ಟಿಕೆಟ್ ಕೇಳಿದರೆ ನಿರಾಕರಿಸುತ್ತಾರೆ. ಯಡಿಯೂರಪ್ಪ ಕೇಂದ್ರದ ವರಿಷ್ಠರ ಮೇಲೆ ತಮ್ಮ ಪ್ರಭಾವ ಬಳಸಿ ಟಿಕೆಟ್ ಹಂಚಿಕೆ ಮಾಡಿದ್ದಾರೆ. ಅದರ ಪರಿಣಾಮ ಏನು ಎನ್ನುವುದು ಲೋಕಸಭಾ ಚುನಾವಣೆ ನಂತರ ಗೊತ್ತಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶ ಮತ್ತು ರಾಜ್ಯದಲ್ಲಿ ಈಶ್ವರಪ್ಪ ಸ್ಪರ್ಧೆ ಮಾಡಿರುವ ಬಗ್ಗೆ ದೊಡ್ಡಮಟ್ಟದ ಚರ್ಚೆಯಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಕುಟುಂಬ ರಾಜಕಾರಣ ವಿರೋಧಿಸಿಕೊಂಡು ಬಂದಿದ್ದಾರೆ. ಈ ಲೋಕಸಭಾ ಚುನಾವಣೆ ನಂತರ ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಕೊನೆಯಾಗಲಿದೆ. ನನ್ನ ಸ್ಪರ್ಧೆ ಬಿಜೆಪಿ ವಿರುದ್ಧವಲ್ಲ. ಕುಟುಂಬ ರಾಜಕಾರಣದ ವಿರುದ್ಧ. ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ತೊಲಗಬೇಕು ಎಂದು ಅವರು ಪುನರುಚ್ಚರಿಸಿದರು.

Join Whatsapp
Exit mobile version