ನಾನು ಜೈಲಿಗೆ ಬೇಕಾದ್ರೂ ಹೋಗ್ತೀನಿ ಆದ್ರೆ, ಕಾಂಗ್ರೆಸ್ ಗೆ ಹೋಗಲ್ಲ: ಮುನಿರತ್ನ

Prasthutha|

ಬೆಂಗಳೂರು: ನನ್ನ ಜೈಲಿಗೆ ಹಾಕಿದರೆ ನಾನು ಜೈಲಿಗೆ ಹೋಗುತ್ತೇನೆ. ಆದರೆ ಯಾವುದೇ ಕಾರಣಕ್ಕೂ ಮತ್ತೆ ಕಾಂಗ್ರೆಸ್ ಗೆ ಹೋಗಲ್ಲ ಎಂದು ಶಾಸಕ ಮುನಿರತ್ನ ಹೇಳಿದ್ದಾರೆ.

- Advertisement -


ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಆಪರೇಷನ್ ಹಸ್ತದ ಬಗ್ಗೆ ಮಾತನಾಡಿದ ಅವರು, ಐದು ವರ್ಷ ಜೈಲಿನಲ್ಲೇ ಕುಳಿತಿರುತ್ತೇನೆ. ನನ್ನ ಕ್ಷೇತ್ರದ ಅಭಿವೃದ್ಧಿ ಮಾಡಿಕೊಟ್ಟರೆ ಸಾಕು. ಬೇಕಿದ್ದರೆ ರಾಜೀನಾಮೆ ಕೊಡು, ಕ್ಷೇತ್ರದ ಅಭಿವೃದ್ಧಿ ಮಾಡಿಕೊಡ್ತೇವೆ ಎಂದರೆ ರಾಜೀನಾಮೆ ಕೊಡುತ್ತೇನೆ. ಆದರೆ ಕಾಂಗ್ರೆಸ್ ಗೆ ಮಾತ್ರ ಸೇರಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


17 ಜನರಲ್ಲಿ ಯಾರು ಕಾಂಗ್ರೆಸ್ ಗೆ ಹೋಗ್ತಾರೆ ಅಂತ ನನಗೆ ಗೊತ್ತಿಲ್ಲ. ನಾನಂತೂ ಬಿಜೆಪಿ ಬಿಟ್ಟು ಹೋಗಲ್ಲ. ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆಯೇ ಹೊರತು ಕಾಂಗ್ರೆಸ್ ಗೆ ಹೋಗಲ್ಲ ಎಂದರು

Join Whatsapp