Home ಟಾಪ್ ಸುದ್ದಿಗಳು NDA ಸಭೆಗೆ ಆಹ್ವಾನ ಬಂದರೆ ಹೋಗುತ್ತೇನೆ ಎಂದ ಕುಮಾರಸ್ವಾಮಿ

NDA ಸಭೆಗೆ ಆಹ್ವಾನ ಬಂದರೆ ಹೋಗುತ್ತೇನೆ ಎಂದ ಕುಮಾರಸ್ವಾಮಿ

ಬೆಂಗಳೂರು: NDA ಸಭೆಗೆ ಆಹ್ವಾನ ನೀಡಿದರೆ ನಾನು ಸಭೆಗೆ ಹೋಗುತ್ತೇನೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್ ಡಿ ಎ ಮತ್ತು ಯುಪಿಎ ಸಭೆಗೆ ಇನ್ನೂ ನನಗೆ ಆಹ್ವಾನ ಬಂದಿಲ್ಲ. ಯುಪಿಎ ಸಭೆಗೆ ಆಹ್ವಾನ ಬಂದರೂ ನಾವು ಹೋಗಲ್ಲ. ಎನ್ ಡಿ ಎ ಸಭೆಗೆ ಆಹ್ವಾನ ಬಂದರೆ ಹೋಗಿ ಚರ್ಚೆ ಮಾಡಿ ಮಾತನಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.


ಕುಮಾರಸ್ವಾಮಿ ಬಿಜೆಪಿ ಜೊತೆ ದೋಸ್ತಿ ಮಾಡಿಕೊಂಡರೆ ಕೇಂದ್ರ ಸಚಿವ ಸ್ಥಾನ, ವಿರೋಧ ಪಕ್ಷದ ಸ್ಥಾನ ನೀಡಬಹುದು ಎಂಬ ಚರ್ಚೆಗೆ ಉತ್ತರ ನೀಡಿದ ಅವರು, ನನಗೆ ಕೇಂದ್ರ ಸಚಿವ ಸ್ಥಾನ ಅಥವಾ ವಿಪಕ್ಷ ಸ್ಥಾನದ ಅವಶ್ಯಕತೆ ಇಲ್ಲ. ಅದರ ಚರ್ಚೆಯೂ ಮಾಡಲ್ಲ. ಬಿಜೆಪಿಯಲ್ಲಿ ಸಮರ್ಥರು ಇದ್ದಾರೆ. ಅವರನ್ನು ವಿರೋಧ ಪಕ್ಷದ ನಾಯಕರಾಗಿ ಆಯ್ಕೆ ಮಾಡಿ ಎಂದು ಕೇಂದ್ರದ ನಾಯಕರಿಗೆ ಹೇಳುತ್ತೇನೆ ಎಂದರು.

Join Whatsapp
Exit mobile version