Home ಟಾಪ್ ಸುದ್ದಿಗಳು ಸಣ್ಣ ಸರ್ಕಾರಿ ಸ್ಥಾನಮಾನ ನೀಡಿದರೂ ನಿಭಾಯಿಸುತ್ತೇನೆ: ಯತೀಂದ್ರ ಸಿದ್ದರಾಮಯ್ಯ

ಸಣ್ಣ ಸರ್ಕಾರಿ ಸ್ಥಾನಮಾನ ನೀಡಿದರೂ ನಿಭಾಯಿಸುತ್ತೇನೆ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಸಣ್ಣ ಸರ್ಕಾರಿ ಸ್ಥಾನಮಾನ ನೀಡಿದರೂ ನಿಭಾಯಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ಧರಾಮಯ್ಯ ಹೇಳಿದ್ದಾರೆ.


ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಬಾರಿಯಂತೆ ಸಣ್ಣ ಹುದ್ದೆ ನೀಡಿದರು ನಿಭಾಯಿಸುತ್ತೇನೆ. ತಂದೆಯವರು ಸಿಎಂ ಆಗಿರುವ ಕಾರಣ ಕ್ಷೇತ್ರದ ಜನರಿಗೆ ಹೆಚ್ಚು ಸಮಯ ಕೊಡಲಾಗುತ್ತಿಲ್ಲ. ಅವರನ್ನ ನೋಡಲು ಬರುವ ರಾಜ್ಯದ ಜನರನ್ನೆಲ್ಲಾ ಭೇಟಿಯಾಗಬೇಕು. ಆದ್ದರಿಂದ ವರುಣ ಕ್ಷೇತ್ರದ ಮತದಾರರಿಗೆ ಹೆಚ್ಚು ಸಮಯ ಕೊಡಲಾಗುತ್ತಿಲ್ಲ. ಜನರ ಸಮಸ್ಯೆಯನ್ನು ಅಧಿಕಾರಿಗಳೊಂದಿಗೆ ಚರ್ಚಿಸಬೇಕು. ಅಧಿಕಾರಿಗಳಿಗೆ ಹೇಳಿ ಜನರ ಸಣ್ಣ ಪುಟ್ಟ ಸಮಸ್ಯೆ ಬಗೆಹರಿಸಲು ಸರ್ಕಾರಿ ಸ್ಥಾನಮಾನ ಇರಬೇಕು. ನನಗೆ ಯಾವುದಾದರು ಚಿಕ್ಕದಾದ ಸ್ಥಾನಮಾನ ನೀಡಿದರು ಸಹಕಾರಿ ಆಗುತ್ತದೆ ಎಂದರು.

Join Whatsapp
Exit mobile version