ಬೆಂಗಳೂರು: ರಾಜ್ಯ ಸಭೆಗೆ ಆಯ್ಕೆ ಆಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ನಾನು ತುಳುಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡುತ್ತೇನೆ ಎಂದು ಹೇಳಿದ್ದಾರೆ.
ಹೆಗ್ಡೆಯವರಿಗೆ ಬೇರೆ-ಬೇರೆ ತುಳು ಸಂಘಟನೆಗಳಿಂದ ಸನ್ಮಾನಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಮಾತನಾಡಿದ ವೀರೇಂದ್ರ ಹೆಗ್ಗಡೆಯವರು ‘ರಾಜ್ಯ ಸಭೆಗೆ ನಾನು ಆಯ್ಕೆ ಆದದ್ದು ತುಂಬಾ ಖುಷಿಯಾಗಿದೆ. ನಮ್ಮ ತುಳುಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ನಾನು ಸೇರ್ಪಡೆ ಮಾಡಲು ಪ್ರಯತ್ನ ಮಾಡುತ್ತೇನೆ’ ಎಂದಿದ್ದಾರೆ
ಈ ಹಿಂದೆ 2016 ರಲ್ಲಿ ಡಾ. ವೀರೇಂದ್ರ ಹೆಗ್ಗಡೆಯವರ ನೇತೃತ್ವದ ನಿಯೋಗವು ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವರಾದ ರಾಜನಾಥ್ ಸಿಂಗ್ ಇವರನ್ನು ದೆಹಲಿಯ ಕಛೇರಿಯಲ್ಲಿ ಭೇಟಿಯಾಗಿ ತುಳು ಭಾಷೆಯನ್ನು ಭಾರತ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂದು ಮನವಿ ಮಾಡಿತ್ತು.