Home ಟಾಪ್ ಸುದ್ದಿಗಳು ನಾಳೆ ಬಿಜೆಪಿ ಸೇರ್ಪಡೆಯಾಗುತ್ತೇನೆ: ಸುಮಲತಾ

ನಾಳೆ ಬಿಜೆಪಿ ಸೇರ್ಪಡೆಯಾಗುತ್ತೇನೆ: ಸುಮಲತಾ

ಬೆಂಗಳೂರು: ನಟಿ ಹಾಗೂ ಸ್ವತಂತ್ರ ಸಂಸದೆ ಸುಮಲತಾ ಅಂಬರೀಷ್ ಬಿಜೆಪಿ ಸೇರ್ಪಡೆ ದಿನಾಂಕ ನಿಗದಿಯಾಗಿದೆ. ನಾಳೆ (ಶುಕ್ರವಾರ) ಬೆಳಗ್ಗೆ ಬೆಳಗ್ಗೆ 11 ಗಂಟೆಗೆ ಬೆಂಬಲಿಗರೊಂದಿಗೆ ಬಿಜೆಪಿಯನ್ನು ಸೇರುತ್ತಿರುವುದಾಗಿ ಅವರು Xನಲ್ಲಿ ಪೋಸ್ಟ್ ಮಾಡಿ ಹೇಳಿದ್ದಾರೆ.

ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದೆ.

ಅದರಂತೆಯೇ, ಬಿಜೆಪಿ ನಾಯಕರ ಸಮ್ಮುಖದಲ್ಲಿ 5 ಏಪ್ರಿಲ್ 2024ರ ಶುಕ್ರವಾರ ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವೆ ಎಂದಿದ್ದಾರೆ.

ನಮ್ಮ ಕರುನಾಡಿನ ಸಕ್ಕರೆಯ ನಾಡು ಮಂಡ್ಯದ ನನ್ನ ಸ್ವಾಭಿಮಾನಿ ಬಂಧುಗಳ, ಡಾ.ಅಂಬರೀಶ್ ಅವರ ಅಭಿಮಾನಿಗಳ ಹಾಗೂ ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದ ಎಂದಿನಂತೆ ಇರಲಿ ಎಂದು ನನ್ನ ಸವಿನಯ ಕೋರಿಕೆ” ಎಂದು ಸುಮಲತಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ, ಆರ್.‌ ಅಶೋಕ್‌, ಮಾಜಿ ಸಿಎಂ ಬಿ.ಎಸ್‌. ಬಿ.ಎಸ್.‌ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಬಿಜೆಪಿ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಮ್ಮುಖದಲ್ಲಿ ಸಮಲತಾ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

Join Whatsapp
Exit mobile version