ಈ ಬಾರಿ ಚಾಮುಂಡೇಶ್ವರಿಯಲ್ಲಿ ನಾನು ಸ್ಪರ್ಧೆ ಮಾಡಲ್ಲ: ಸಿದ್ದರಾಮಯ್ಯ

Prasthutha|

ಮಂಡ್ಯ: ನಾನು ಈ ಬಾರಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ,ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

- Advertisement -

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಚಾಮುಂಡೇಶ್ವರಿಯಲ್ಲಿ ಸ್ಪರ್ಧೆ ಮಾಡಲ್ಲ. ನನಗೆ ನಾಲ್ಕೈದು ಕ್ಷೇತ್ರಗಳಿಂದ ಸ್ಪರ್ಧಿಸಲು ಆಹ್ವಾನ ಬಂದಿದೆ. ನಾನು ಇನ್ನೂ ಎಲ್ಲಿ ನಿಲ್ಲಬೇಕೆಂದು ನಿರ್ಧಾರ ಮಾಡಿಲ್ಲ. ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಿಲ್ಲಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇನ್ನು ನನ್ನ ಪ್ರಕಾರ ಅವಧಿಗೂ ಮುನ್ನ ರಾಜ್ಯದಲ್ಲಿ ಚುನಾವಣೆ ಬರಲ್ಲ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ, ಸಿಟಿ ರವಿ ಸೇರಿದಂತೆ ಹಲವಾರು ನಾಯಕರು ಹೇಳಿದ್ದಾರೆ. ಒಂದು ವೇಳೆ ಅವಧಿಗೂ ಮುನ್ನ ಚುನಾವಣೆ ಬಂದರೆ ನಾವು ಸಿದ್ಧರಾಗಿದ್ದೇವೆ. ರಾಜ್ಯದ ಜನ ನಮ್ಮ ಪರವಾಗಿದ್ದಾರೆ ಎಂದು ಹೇಳಿದರು.

Join Whatsapp
Exit mobile version