ನವದೆಹಲಿ: ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಅಗತ್ಯವಿರುವ ಹಣ ತನ್ನ ಬಳಿ ಇಲ್ಲ. ಆದ್ದರಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ಬಿಜೆಪಿಯ ಪ್ರಸ್ತಾಪವನ್ನು ನಿರಾಕರಿಸಿದ್ದೇನೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ಸ್ಪರ್ಧಿಸುವ ಆಯ್ಕೆಯನ್ನು ನೀಡಿದ್ದಾರೆ, ಆದರೆ ಸ್ಪರ್ಧಿಸಲು ಹಣ ಇಲ್ಲ ಎಂದು ಕೇಂದ್ರ ವಿತ್ತ ಸಚಿವೆ ಹೇಳಿದ್ದಾರೆ.
ಒಂದು ವಾರಕ್ಕಿಂತಲೂ ಹೆಚ್ವು ದಿನ ಯೋಚಿಸಿದ ಬಳಿಕ ನಾನು, ನನ್ನಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ಬಳಿ ಅಂತಹ ಹಣವಿಲ್ಲ, ಹಣ ಇಲ್ಲ ಎಂದು ಉತ್ತರ ನೀಡಿದೆ ಎಂದು ಅವರು ಮಾಧ್ಯಮ ಸಂವಾದ ಕಾರ್ಯಕ್ರಮವೊಂದರಲ್ಲಿ ಸಚಿವೆ ಹೇಳಿದ್ದಾರೆ.
ಬಿಜೆಪಿ ನಾಯಕರು ನನ್ನ ಸಕಾರಣವನ್ನು ಒಪ್ಪಿಕೊಂಡಿದ್ದಾರೆ, ನಾನು ತುಂಬಾ ಕೃತಜ್ಞನಾಗಿದ್ದೇನೆ ಎಂದೂ ಸಚಿವೆ ಹೇಳಿದ್ದಾರೆ.