ಚಾಮರಾಜನಗರ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಚಿವ ಬಿ ಶ್ರೀರಾಮುಲು ಹೇಳಿದ್ದಾರೆ.
ಚಾಮರಾಜನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಸ್ಪರ್ಧಿಸುವುದರ ಕುರಿತು ಯೋಚನೆ ಮಾಡಿಲ್ಲ. ನಾನು ಸ್ಪರ್ಧಿಸುವ ವಿಚಾರ ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು. ಯಾರಿಗೆ ಟಿಕೆಟ್ ನೀಡುತ್ತಾರೆ ಅವರ ಪರವಾಗಿ ನಾವು ಕೆಲಸ ಮಾಡುತ್ತೇವೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 25ಕ್ಕೂ ಅಧಿಕ ಸ್ಥಾನವನ್ನ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರದಲ್ಲಿ ಎಸ್ ಟಿ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ವಿಚಾರವಾಗಿ ಮಾತನಾಡಿದ ಅವರು ಇದು ಅವರ ಪಕ್ಷದ ಆಂತರಿಕ ವಿಚಾರ ನಾನು ಪ್ರಶ್ನೆ ಮಾಡುವುದಿಲ್ಲ. ಸೂಕ್ತ ಸ್ಥಾನ ಮಾನ ನೀಡುವುದು ಅವರಿಗೆ ಬಿಟ್ಟ ವಿಚಾರ ಎಂದರು.