ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ನಿಖಿಲ್ ಕುಮಾರಸ್ವಾಮಿ

Prasthutha|

ನವದೆಹಲಿ: 2024ರ ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

- Advertisement -


ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚರ್ಚಿಸಲು ಕುಮಾರಸ್ವಾಮಿ ಜೊತೆ ನಿಖಿಲ್ ಕೂಡ ದೆಹಲಿಗೆ ತೆರಳಿದ್ದಾರೆ. ಅಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದ ಮಟ್ಟಿಗೆ ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಸ್ಪಷ್ಟನೆ ನೀಡಿದರು.


ಮುಂದಿನ ಐದು ವರ್ಷ ನಿಖಿಲ್ ಕುಮಾರಸ್ವಾಮಿಯನ್ನು ಕರೆತರುವ ಪ್ರಶ್ನೆಯೇ ಇಲ್ಲ ಎಂದು ಹೆಚ್ ಡಿ ಕುಮಾರಸ್ವಾಮಿ ಅವರು ಹೇಳಿಕೆ ನೀಡಿದ ಬೆನ್ನಲ್ಲೇ ನಿಖಿಲ್ ಈ ಹೇಳಿಕೆಯನ್ನು ನೀಡಿದ್ದಾರೆ.

Join Whatsapp