ಕಲಬುರಗಿ: ನಾನು ವಿಧಾನಸೌಧದಲ್ಲಿ ಹಿಜಾಬ್ ಧರಿಸಿಯೇ ಕೂರುತ್ತೇನೆ. ಧೈರ್ಯವಿದ್ದರೆ ತಡೆಯಿರಿ ಎಂದು ಕಲಬುರಗಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಖನೀಜ್ ಫಾತೀಮಾ ಸವಾಲು ಹಾಕಿದ್ದಾರೆ.
ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ. ಅದಕ್ಕಾಗಿ ಈ ರೀತಿಯ ವಿಚಾರಗಳನ್ನು ಮುನ್ನೆಲೆಗೆ ತರುತ್ತಿದ್ದಾರೆ. ನಾನು ಸಾಧ್ಯವಾದರೆ ಉಡುಪಿಗೆ ಹೋಗಿ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ನೀಡುತ್ತೇನೆ ಎಂದು ತಿಳಿಸಿದರು.