ಕರ್ನಾಟಕದಲ್ಲಿ ಕಾಂಗ್ರೆಸ್ ಉಸಿರನ್ನು ನಾನು ನಿಲ್ಲಿಸುತ್ತೇನೆ : ಯಡಿಯೂರಪ್ಪ ಹೊಸ ವರಸೆ

Prasthutha: December 5, 2021

ಮಂಡ್ಯ: ಕರ್ನಾಟಕದಲ್ಲಿ ಕಾಂಗ್ರೆಸ್ ಉಸಿರನ್ನು ನಾನು ನಿಲ್ಲಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಕರ್ನಾಟಕದಲ್ಲಿ ಒಂದಿಬ್ಬರಿಂದ ಕಾಂಗ್ರೆಸ್ ಉಸಿರಾಡುತ್ತಿದೆ, ಆ ಉಸಿರನ್ನು ನಿಲ್ಲಿಸುವ ಕೆಲಸವನ್ನು ನಾನೇ ಮಾಡುತ್ತೇನೆ ಎಂದಿದ್ದಾರೆ. ಕಾಂಗ್ರೆಸ್ ಉಸಿರನ್ನು ನಿಲ್ಲಿಸಲು ನಾವು ಈಗಿನ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಬೇಕು ಎಂದು ಹೇಳಿದ್ದಾರೆ.

ಮಂಡ್ಯದಲ್ಲಿ ನಡೆದ ಬಿಜೆಪಿ ಗ್ರಾಮ ಪಂಚಾಯಿತಿ ಸದಸ್ಯರ ಸಮಾವೇಶದಲ್ಲಿ ಮಾತನಾಡಿದ ಯಡಿಯೂರಪ್ಪ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಇಲ್ಲವೇ ಇಲ್ಲ , ಈ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಮಂಜುಗೆ ಮತ ನೀಡಿ ಗೆಲ್ಲಿಸಿ ಎಂದು ಮತಯಾಚಿಸಿದರು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ 3 ರಿಂದ 4 ಸ್ಥಾನ ಗೆಲ್ಲಬೇಕಿದೆ. ರಾಜ್ಯಾದ್ಯಂತ ಪ್ರವಾಸ ಮಾಡಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಬರಲು ಶ್ರಮಿಸುತ್ತೇನೆ. ಈಗ ಪರಿಷತ್ನ 25 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿ ಸ್ಪರ್ಧೆ ಮಾಡಿದ್ದಾರೆ. 25ರಲ್ಲಿ ಮಂಡ್ಯ ಸೇರಿದಂತೆ 15 ಸ್ಥಾನಗಳಲ್ಲಿ ನಾವು ಗೆಲ್ಲುತ್ತೇವೆ ಎಂದರು.

ಮುಂದಿನ ದಿನಗಳಲ್ಲಿ ನಾನು ಮಂಡ್ಯ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲೂ ಪ್ರವಾಸ ಮಾಡ್ತೇನೆ. ನೀವು ನಿಮ್ಮ ಜಿಲ್ಲೆಯಲ್ಲಿ ತೋರ್ಪಡಿಸಿದ ಪ್ರೀತಿ, ಅಭಿಮಾನಕ್ಕೆ ನಾನು ಋಣಿಯಾಗಿದ್ದೇನೆ. ನಾರಾಯಣ ಗೌಡರ ಸಮ್ಮುಖದಲ್ಲಿ ಈ ಚುನಾವಣೆ ಗೆಲ್ಲಿಸಿ, ನನ್ನೊಟ್ಟಿಗೆ ರಾಜ್ಯದ ಎಲ್ಲಾ ನಾಯಕರನ್ನು ಕರೆ ತರುತ್ತೇನೆ. ಆ ಮೂಲಕ ಹುಟ್ಟೂರಲ್ಲಿ ಬಿಜೆಪಿ ಕಟ್ಟುವ ಕೆಲಸ ಮಾಡೋಣ. ಅದಕ್ಕಾಗಿ ಮಂಜು ಅವರನ್ನ ಗೆಲ್ಲಿಸಿ, ನಮಗೆ ಶಕ್ತಿ ನೀಡಿ ಎಂದು ಸದಸ್ಯರಲ್ಲಿ ಮನವಿಯನ್ನು ಮಾಡಿದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!