ಯಾದಗಿರಿ : ತುಮಕೂರಿನಲ್ಲಿ ಖಾಸಗಿ ಬಸ್ ಅಪಘಾತದ ಬಗ್ಗೆ ಎಲ್ಲಾ ವಿವರವನ್ನು ತಕ್ಷಣ ಪಡೆದು ಕ್ರಮ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಮಾತನಾಡಿದ ಅವರು, ಅಪಘಾತಕ್ಕೆ ಕಾರಣವೇನು ಎಂಬುದನ್ನು ವಿಚಾರಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ. ಈ ಅಪಘಾತದಲ್ಲಿ 8 ಸಾವನ್ನಪ್ಪಿ, 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.