Home ಟಾಪ್ ಸುದ್ದಿಗಳು ಸಂತೋಷ್ ಸಾವು: ಈಶ್ವರಪ್ಪ ಜೊತೆ ಒನ್ ಟು ಒನ್ ಮಾತನಾಡುತ್ತೇನೆ ಎಂದ ಬೊಮ್ಮಾಯಿ

ಸಂತೋಷ್ ಸಾವು: ಈಶ್ವರಪ್ಪ ಜೊತೆ ಒನ್ ಟು ಒನ್ ಮಾತನಾಡುತ್ತೇನೆ ಎಂದ ಬೊಮ್ಮಾಯಿ

ಮಂಗಳೂರು: ಗುತ್ತಿಗೆದಾರ ಹಾಗೂ ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ತನಿಖೆಯಲ್ಲಿ ಸರಕಾರ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಪುನರುಚ್ಚರಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಎಸ್ ಈಶ್ವರಪ್ಪ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಅವರಲ್ಲಿ ಘಟನೆಯ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.


ಬೆಂಗಳೂರಿನಲ್ಲಿ ಈ ಕುರಿತು ಈಶ್ವರಪ್ಪ ಜೊತೆ ಒನ್ ಟು ಒನ್ ಮಾತನಾಡುತ್ತೇನೆ, ಘಟನೆಯ ಬಗ್ಗೆ ಎಲ್ಲಾ ಮಾಹಿತಿ ಪಡೆಯುತ್ತೇನೆ ಎಂದರು. ಸಿಎಂ ಹೇಳಿದರೆ ರಾಜೀನಾಮೆ ನೀಡುತ್ತೇನೆ ಎಂದು ಈಶ್ವರಪ್ಪ ಹೇಳಿದ್ದಾರೆ ಎನ್ನುವ ಮಾಹಿತಿ ನನಗಿಲ್ಲ, ಈ ಬಗ್ಗೆ ಈಶ್ವರಪ್ಪ ಬಳಿ ಮಾತನಾಡುತ್ತೇನೆ ಎಂದಿದ್ದಾರೆ.


ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹದ ಕುರಿತು ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ, ವಿರೋಧ ಪಕ್ಷ ಕಾಂಗ್ರೆಸ್ ಇದರಲ್ಲಿ ತಪ್ಪು ಕಂಡುಹಿಡಿಯಲು ಪ್ರಯತ್ನ ಮಾಡುತ್ತಿದೆ. ತನಿಖೆಯಲ್ಲಿ ಸತ್ಯಾಂಶ ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ.

Join Whatsapp
Exit mobile version