ಮೋದಿ ನಾಯಕತ್ವದಲ್ಲಿ ಸಣ್ಣ ಸೈನಿಕನಾಗಿ ಕೆಲಸ ಮಾಡುತ್ತೇನೆ: ಬಿಜೆಪಿ ಸೇರ್ಪಡೆಗೂ ಮುನ್ನ ಹಾರ್ದಿಕ್ ಪಟೇಲ್

Prasthutha|

ಗುಜರಾತ್: ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿರುವ ಗುಜರಾತ್ ಪಾಟೀದಾರ್ ನಾಯಕ ಹಾರ್ದಿಕ್ ಪಟೇಲ್ ಇಂದು ಬಿಜೆಪಿ ಸೇರಲು ಸಜ್ಜಾಗಿದ್ದಾರೆ. ಬಿಜೆಪಿ ಸೇರ್ಪಡೆಗೂ ಮುನ್ನ ಟ್ವೀಟ್ ಮಾಡಿರುವ ಹಾರ್ದಿಕ್, ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ರಾಷ್ಟ್ರ ಸೇವೆ ಮಾಡಲು “ಸಣ್ಣ ಸೈನಿಕ”ನಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

- Advertisement -

“ರಾಷ್ಟ್ರೀಯ ಹಿತಾಸಕ್ತಿ, ರಾಜ್ಯ ಹಿತಾಸಕ್ತಿ, ಸಾರ್ವಜನಿಕ ಹಿತಾಸಕ್ತಿ ಮತ್ತು ಸಾಮಾಜಿಕ ಹಿತಾಸಕ್ತಿಯ ಭಾವನೆಗಳೊಂದಿಗೆ ಇಂದಿನಿಂದ ನಾನು ಹೊಸ ಅಧ್ಯಾಯವನ್ನು ಪ್ರಾರಂಭಿಸಲಿದ್ದೇನೆ. ಭಾರತದ ಯಶಸ್ವಿ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ರಾಷ್ಟ್ರಸೇವೆಯ ಉದಾತ್ತ ಕಾರ್ಯದಲ್ಲಿ ನಾನು ಸಣ್ಣ ಸೈನಿಕನಾಗಿ ಕೆಲಸ ಮಾಡುತ್ತೇನೆ ಎಂದಿದ್ದಾರೆ.

Join Whatsapp