ಧಾರವಾಡ: ನನ್ನ ಬಲಿದಾನವಾದರೂ ಪರವಾಗಿಲ್ಲ, ಮಸ್ಲಿಮ್ ಕಾಲೇಜು ಸ್ಥಾಪನೆಗೆ ಬಿಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ರಾಜ್ಯದ ಬಿಜೆಪಿ ಸರ್ಕಾರ 10 ಮುಸ್ಲಿಂ ಕಾಲೇಜುಗಳ ಸ್ಥಾಪನೆಗೆ ಮುಂದಾಗಿರುವ ಕ್ರಮವನ್ನು ಖಂಡಿಸಿದ ಅವರು, ನನ್ನ ಬಲಿದಾನವಾದರೂ ಸರಿ, ಮುಸ್ಲಿಮ್ ಕಾಲೇಜು ಸ್ಥಾಪನೆಗೆ ನಾನು ಒಪ್ಪುವುದಿಲ್ಲ. ಮುಸ್ಲಿಮ್ ಕಾಲೇಜು ಸ್ಥಾಪನೆಗೆ ನಾನು ವಿರೋಧ ಮಾಡುತ್ತೇನೆ. ಈ ಸಂಬಂಧ ಹಿಂದೂ ಸಂಘಟನೆಗಳ ಒಕ್ಕೂಟದಿಂದ ಅದರ ವಿರುದ್ಧ ಹೋರಾಟ ಮಾಡುತ್ತೇನೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ಮುಸ್ಲಿಮರಿಗೆ ಸಪೋರ್ಟ್ ಮಾಡಿದ ಪರಿಣಾಮವಾಗಿ ಬಿಜೆಪಿಯವರು ಹೀಗೆ ಮಾಡುತ್ತಿದ್ದಾರೆ. ಸಂವಿಧಾನ ವಿರೋಧಿ ನೀತಿಗೆ ಕಾಂಗ್ರೆಸ್ ಸಪೋರ್ಟ್ ಮಾಡುತ್ತಿದೆ. ಹಿಜಾಬ್ ನ ಸಲುವಾಗಿ ಮುಸ್ಲಿಂ ಕಾಲೇಜುಗಳನ್ನು ಕೊಡುವುದು ತಪ್ಪು. ಕೂಡಲೇ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.