ಜಿ20 ಔತಣಕೂಟಕ್ಕೆ ನಾನು ಹೋಗಲ್ಲ ಎಂದ ಸಿಎಂ ಸಿದ್ದರಾಮಯ್ಯ

Prasthutha|

ಹುಬ್ಬಳ್ಳಿ: ಜಿ20 ಸಭೆಗೆ ನನ್ನನ್ನು ಕರೆದಿಲ್ಲ. ಔತಣಕೂಟಕ್ಕೆ ಕರೆದಿದ್ದಾರೆ. ನನಗೆ ಬೇರೆ ಕೆಲಸ ಇರುವುದರಿಂದ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -


ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರ ರಾಜಕಾರಣಕ್ಕೆ ನಾನು ಹೋಗುವುದಿಲ್ಲ. ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾದ ಬಳಿಕ ನೇರವಾಗಿ ಪ್ರಧಾನಿಯಾದರು. ಪ್ರಜಾಪ್ರಭುತ್ವದಲ್ಲಿ ಏನು ಬೇಕಾದರೂ ಆಗಬಹುದು. ಸುಮ್ಮನೆ ಅವರನ್ನು ಟೀಕೆ ಮಾಡುವುದಿಲ್ಲ. ಇರುವ ಸಮಸ್ಯೆಗಳ ಬಗ್ಗೆ ಮಾತ್ರ ನಾನು ಮಾತನಾಡುತ್ತೇನೆ ಎಂದಿದ್ದಾರೆ.


ಮಲ್ಲಿಕಾರ್ಜುನ ಖರ್ಗೆಯವರು ಕೇವಲ ಕಾಂಗ್ರೆಸ್ ಅಧ್ಯಕ್ಷರಲ್ಲ, ಅಧಿಕೃತವಾಗಿ ಲೋಕಸಭೆಯ ವಿರೋಧಪಕ್ಷದ ನಾಯಕರಾಗಿದ್ದು, ಅವರನ್ನು ಜಿ20 ಸಭೆ ಆಹ್ವಾನಿಸದಿರುವುದು ತಪ್ಪು ಎಂದು ಆಕ್ಷೇಪಿಸಿದರು.

Join Whatsapp