Home ಟಾಪ್ ಸುದ್ದಿಗಳು ಮುಂದಿನ ಚುನಾವಣೆಗೆ ನಾನು ಸ್ಪರ್ಧಿಸಲ್ಲ: ಪುತ್ರನಿಗೆ ಶಿಕಾರಿಪುರ ಕ್ಷೇತ್ರ ಬಿಟ್ಟುಕೊಟ್ಟ ಬಿಎಸ್ವೈ

ಮುಂದಿನ ಚುನಾವಣೆಗೆ ನಾನು ಸ್ಪರ್ಧಿಸಲ್ಲ: ಪುತ್ರನಿಗೆ ಶಿಕಾರಿಪುರ ಕ್ಷೇತ್ರ ಬಿಟ್ಟುಕೊಟ್ಟ ಬಿಎಸ್ವೈ

ಶಿವಮೊಗ್ಗ: ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ, ಶಿಕಾರಿಪುರ ಕ್ಷೇತ್ರದಿಂದ ಪುತ್ರ ಬಿ.ವೈ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.


ಶಿಕಾರಿಪುರದ ಅಂಜಾನಪುರ ಡ್ಯಾಂಗೆ ಬಾಗಿನ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರದಿಂದ ಪುತ್ರ ಬಿ.ವೈ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ. ಶಿಕಾರಿಪುರ ತಾಲೂಕಿನ ಜನತೆ ನನಗಿಂತ ಹೆಚ್ಚು ಮತಗಳ ಅಂತರದಿಂದ ವಿಜಯೇಂದ್ರನನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.


ಹಳೇ ಮೈಸೂರು ಭಾಗದಿಂದ ಸ್ಪರ್ಧಿಸುವಂತೆ ಒತ್ತಡ ಇದೆ. ಆದರೆ ನಾನು ಕ್ಷೇತ್ರ ಬಿಟ್ಟುಕೊಡುತ್ತಿದ್ದು, ಬಿ.ವೈ ವಿಜಯೆಂದ್ರ ಶಿಕಾರಿಪುರದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಿದ್ದಾರೆ.

Join Whatsapp
Exit mobile version