Home ಟಾಪ್ ಸುದ್ದಿಗಳು ಎಲ್ಲೆ ಮೀರಿದ IAS-IPS ಅಧಿಕಾರ; ಸತ್ತು ಹೋದ ರಾಜ್ಯ ಸರ್ಕಾರ

ಎಲ್ಲೆ ಮೀರಿದ IAS-IPS ಅಧಿಕಾರ; ಸತ್ತು ಹೋದ ರಾಜ್ಯ ಸರ್ಕಾರ

ಬೆಂಗಳೂರು: ಎಸಿಬಿ ಕಾರ್ಯವೈಖರಿ ಬಗ್ಗೆ ಪ್ರಶ್ನೆ‌ ಮಾಡಿದ್ದ ನ್ಯಾಯಮೂರ್ತಿಗಳಿಗೆ ವರ್ಗಾವಣೆ ಬೆದರಿಕೆಯೊಡ್ಡಿರುವ ಬಗ್ಗೆ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಟ್ವೀಟ್ ಮಾಡಿರುವ ಅವರು, ಎಸಿಬಿ ಕಾರ್ಯವೈಖರಿ ಬಗ್ಗೆ ಪ್ರಶ್ನೆ‌ ಮಾಡಿದ್ದ ನ್ಯಾಯಮೂರ್ತಿಗಳನ್ನು ಐಪಿಎಸ್ ಅಧಿಕಾರಿಯೊಬ್ಬರು ವರ್ಗಾವಣೆ ನಡೆಸಲು ಮುಂದಾಗುತ್ತಾರೆ ಎಂದರೆ ಸರ್ಕಾರ ಸತ್ತು ಹೋಗಿದೆ ಎಂದರ್ಥ.

ಈ ಸರ್ಕಾರದಲ್ಲಿ IAS-IPS ಗಳು ಹೈಕೋರ್ಟ್ ನ್ಯಾಯಮೂರ್ತಿಗಳನ್ನೇ ವರ್ಗಾವಣೆ ಮಾಡುವಷ್ಟು ಬಲಾಢ್ಯರೇ? ಹಾಗಾದರೆ ಈ ಸರ್ಕಾರಕ್ಕೆ ಅಧಿಕಾರಿಗಳ ಮೇಲೆ ನಿಯಂತ್ರಣವೇ ಇಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Join Whatsapp
Exit mobile version