ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ನಡುವಣ ಸಂಘರ್ಷಕ್ಕೆ ಸಂಬಂಧಿಸಿ ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಆದರೆ, ಯಾವ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ ಎಂಬುದನ್ನು ತಿಳಿಸಿಲ್ಲ. ಜತೆಗೆ ಐಎಎಸ್ ಅಧಿಕಾರಿ, ರೂಪಾ ಅವರ ಪತಿ ಮುನೀಶ್ ಮೌದ್ಗಿಲ್ ಅವರನ್ನೂ ವರ್ಗಾವಣೆ ಮಾಡಲಾಗಿದೆ. ಇವರನ್ನು ಡಿಪಿಆರ್ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.