Home ಟಾಪ್ ಸುದ್ದಿಗಳು ಜೆರೋಸಾ ಶಾಲೆ ಕೇಸ್: ತನಿಖೆಗೆ ಬಂದ ಐಎಎಸ್ ಅಧಿಕಾರಿ, ಶಿಕ್ಷಣ ಇಲಾಖೆ ಅಧಿಕಾರಿಗಳ ವಿಚಾರಣೆ

ಜೆರೋಸಾ ಶಾಲೆ ಕೇಸ್: ತನಿಖೆಗೆ ಬಂದ ಐಎಎಸ್ ಅಧಿಕಾರಿ, ಶಿಕ್ಷಣ ಇಲಾಖೆ ಅಧಿಕಾರಿಗಳ ವಿಚಾರಣೆ

ಮಂಗಳೂರು: ಜೆರೋಸಾ ಶಾಲೆಯ ಶಿಕ್ಷಕಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ನೇಮಕಗೊಂಡಿರುವ ಐಎಎಸ್ ಅಧಿಕಾರಿ ಡಾ. ಆಕಾಶ್ ಶಂಕರ್ ಮಂಗಳೂರಿಗೆ ಆಗಮಿಸಿದ್ದು, ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ.


ಮಂಗಳೂರಿನ ಜಿಲ್ಲಾ ಪಂಚಾಯತ್ ಬಳಿಯ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಡಿಡಿಪಿಐ, ಬಿಇಓ ಮತ್ತು ಇಲಾಖೆಯ ಇತರ ಅಧಿಕಾರಿಗಳು ಆಗಿರುವ ಬೆಳವಣಿಗೆ ಬಗ್ಗೆ ತನಿಖಾಧಿಕಾರಿ ಮುಂದೆ ಮಾಹಿತಿ ನೀಡಿದ್ದಾರೆ.


ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದಷ್ಟು ಬೇಗ ತನಿಖೆ ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ. ಎಲ್ಲರೂ ತನಿಖೆಗೆ ಸಹಕರಿಸಬೇಕು ಎಂದು ತಿಳಿಸಿದ್ದಾರೆ.

Join Whatsapp
Exit mobile version