ಮುಂಬೈ: ಅಧಿಕಾರ ಮತ್ತು ಸವಲತ್ತುಗಳ ದುರುಪಯೋಗ ಆರೋಪ ಎದುರಿಸುತ್ತಿರುವ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರನ್ನು ಮಸ್ಸೂರಿಯಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್ (LBSNAA) ಮಂಗಳವಾರ ವಾಪಸ್ ಕರೆಸಿಕೊಂಡಿದ್ದು, ಅವರಿಗೆ ನೀಡಲಾಗುತ್ತಿದ್ದ ಪ್ರೊಬೇಷನರಿ ಅವಧಿಯನ್ನು ಸ್ಥಗಿತಗೊಳಿಸಲಾಗಿದೆ.
ನಾಗರಿಕ ಸೇವೆಗೆ ಸೇರಲು ಅಂಗವೈಕಲ್ಯ ಮತ್ತು ಒಬಿಸಿ ಕೋಟಾ ದುರ್ಬಳಕೆ ಮಾಡಿಕೊಂಡ ಆರೋಪದ ನಡುವೆ ಪುಣೆಯಿಂದ ವಾಶಿಮ್‌ಗೆ ವರ್ಗಾವಣೆಗೊಂಡ ಖೇಡ್ಕರ್, ತನ್ನ ಮಾನಹಾನಿ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಜುಲೈ 23 ರೊಳಗೆ ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್ ಗೆ ವಾಪಸ್ ತೆರಳುವಂತೆ ಆಕೆಗೆ ತಿಳಿಸಲಾಗಿದೆ. ಮುಂದಿನ ಅಗತ್ಯ ಕ್ರಮಕ್ಕಾಗಿ ಆಕೆಯನ್ನು ವಾಪಸ್ ಕರೆಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ರಾಜ್ಯ ಸರ್ಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ