ರಾಂಚಿ: ನರೇಗಾ ನಿಧಿಯನ್ನು ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಜಾರ್ಖಂಡ್ ಗಣಿ ಕಾರ್ಯದರ್ಶಿ ಪೂಜಾ ಸಿಂಘಾಲ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ.
15 ಗಂಟೆಗಳ ಕಾಲ ಸುದೀರ್ಘ ವಿಚಾರಣೆಯ ಬಳಿಕ ಅಂತಿಮವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು 2000 ಬ್ಯಾಚ್ ನ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ರನ್ನು ಪಿಎಂಎಲ್ ಎ ಸೆಕ್ಷನ್ ಅಡಿಯಲ್ಲಿ ಬಂಧಿಸಿದೆ. ಪೂಜಾ ಸಿಂಘಾಲ್ ಗೆ ಸಂಬಂಧಿಸಿದ ಚಾರ್ಟರ್ಡ್ ಅಕೌಂಟೆಂಟ್ ಸುಮನ್ ಕುಮಾರ್ ಅವರನ್ನು ಮೂರು ದಿನಗಳ ಹಿಂದೆ ಬಂಧಿಸಲಾಗಿತ್ತು.
ವಿಚಾರಣೆಯ ಎರಡನೇ ದಿನದಂದು ಸಿಂಘಾಲ್ ಅವರನ್ನು ಬಂಧಿಸಲಾಗಿದೆ. ವಿಚಾರಣೆ ಸಮಯದಲ್ಲಿ ಇಡಿ ಕೇಳಿದ ಪ್ರಶ್ನೆಗಳಿಗೆ ಪೂಜಾ ಹಾರಿಕೆ ಉತ್ತರ ನೀಡಿದ್ದರಿಂದ ಆಕೆಯನ್ನು ಬಂಧಿಸಲಾಗಿದೆ.