ದಳಪತಿಗಳಿಗೆ ಇಬ್ರಾಹಿಂ ಮತ್ತೊಮ್ಮೆ ಸೆಡ್ಡು: ಉಚ್ಚಾಟನೆ ಪ್ರಶ್ನಿಸಿ ಕೋರ್ಟ್‌ಗೆ ಅರ್ಜಿ

Prasthutha|

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದು, ಉಚ್ಚಾಟಿಸಲ್ಪಟ್ಟ ಬಳಿಕ ಬಹಿರಂಗವಾಗಿಯೇ ದಳಪತಿಗಳ ವಿರುದ್ದ ಸಮರ ಸಾರಿದ್ದ ಸಿಎಂ ಇಬ್ರಾಹಿಂ ಈಗ ತಮ್ಮ ಉಚ್ಚಾಟನೆಯನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿದ್ದಾರೆ.

- Advertisement -

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿ.ಎಂ ಇಬ್ರಾಹಿಂ ಸಲ್ಲಿಸಿರುವ ಅರ್ಜಿಯಲ್ಲಿ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯನ್ನು ಪ್ರತಿವಾದಿಯಾಗಿಸಿ ಪದಾಧಿಕಾಕಾರಿಗಳ ಉಚ್ಚಾಟನೆ, ಹಂಗಾಮಿ ಅಧ್ಯಕ್ಷರ ನೇಮಕಾತಿಯನ್ನು ಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯಲ್ಲಿ ಪ್ರಶ್ನಿಸಿದ್ದಾರೆ.



Join Whatsapp