ಐಸಿಸಿ ವಿಶ್ವಕಪ್ 2023 ವೇಳಾಪಟ್ಟಿ ಪ್ರಕಟ: ಅ.15ಕ್ಕೆ ಭಾರತ-ಪಾಕ್ ಪಂದ್ಯ

Prasthutha|

ಮುಂಬೈ: ಬಹುನಿರೀಕ್ಷಿತ 13ನೇ ಆವೃತ್ತಿಯ ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿ ಮಂಗಳವಾರ ಪ್ರಕಟಗೊಂಡಿದೆ.

- Advertisement -


ಅಂತರರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ (ICC) ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮುಂಬೈನಲ್ಲಿ ನಡೆದ 100 ದಿನಗಳ ವಿಶ್ವಕಪ್ ಸಮಾರಂಭದಲ್ಲಿ ವಿಶ್ವಕಪ್ 2023 ವೇಳಾಪಟ್ಟಿಯನ್ನು ಅನಾವರಣಗೊಳಿಸಿದೆ.


ಅಕ್ಟೋಬರ್ 5 ರಂದು ಏಕದಿನ ವಿಶ್ವಕಪ್ ಗೆ ಚಾಲನೆ ಸಿಗಲಿದ್ದು ನವೆಂಬರ್ 19 ರವರೆಗೆ ನಡೆಯಲಿದೆ. ಸೆಮಿಫೈನಲ್ ಪಂದ್ಯಗಳು ಮುಂಬೈ ಮತ್ತು ಕೋಲ್ಕತ್ತಾದಲ್ಲಿ ನವೆಂಬರ್ 15 ಮತ್ತು 16 ರಂದು ಆಯೋಜಿಸಲಾಗಿದೆ. ಅಂತಿಮ ಫೈನಲ್ ಪಂದ್ಯವು ಅಹಮದಾಬಾದ್ ನಲ್ಲಿ ನವೆಂಬರ್ 19 ರಂದು ನಡೆಯಲಿದೆ.

- Advertisement -


ಪಾಕಿಸ್ತಾನದ ಆಕ್ಷೇಪಗಳ ಹೊರತಾಗಿಯೂ, ಭಾರತ ಹಾಗೂ ಪಾಕ್ ನಡುವಣ ಪಂದ್ಯವು ಅಕ್ಟೋಬರ್ 15 ರಂದು ಅಹಮದಾಬಾದ್‌ನಲ್ಲೇ ನಡೆಯಲಿದೆ.
ಈ ಪಂದ್ಯವನ್ನು ಚೆನ್ನೈ, ಬೆಂಗಳೂರು ಅಥವಾ ಕೋಲ್ಕತ್ತಾಗೆ ಸ್ಥಳಾಂತರಿಸುವಂತೆ ಪಾಕಿಸ್ತಾನ ಮನವಿ ಮಾಡಿತ್ತು. ಆದರೆ, ಇದೀಗ ಅಂತಿಮವಾಗಿ ಅಹ್ಮದಾಬಾದ್ ನಲ್ಲೇ ನಡೆಸಲು ಒಪ್ಪಿಗೆ ನೀಡಲಾಗಿದೆ.