ಐಸಿಸಿ ವರ್ಲ್ಡ್ ‌ಕಪ್-2023: ಇಂದು ಭಾರತ – ಇಂಗ್ಲೆಂಡ್‌ ಅಭ್ಯಾಸ ಪಂದ್ಯ

Prasthutha|

ಗುವಾಹಟಿ: ವಿಶ್ವಕಪ್‌ ಅಭ್ಯಾಸ ಪಂದ್ಯಗಳು ಶುಕ್ರವಾರ ಆರಂಭಗೊಂಡಿವೆ. ಭಾರತ ಶನಿವಾರ ಗುವಾಹಟಿಯಲ್ಲಿ ಮೊದಲ ಅಭ್ಯಾಸ ಪಂದ್ಯ ಆಡಲಿದ್ದು, ಹಾಲಿ ಚಾಂಪಿಯನ್‌ ಇಂಗ್ಲೆಂಡ್‌ ತಂಡವನ್ನು ಎದುರಿಸಲಿದೆ. ಆದರೆ ಈ ಅಭ್ಯಾಸ ಪಂದ್ಯಗಳಿಗೆ ಅಧಿಕೃತ ಮಾನ್ಯತೆ ಇಲ್ಲ.

- Advertisement -

ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ತಂಡವನ್ನು ಗುವಾಹಟಿಯ ಬರ್ಸಾಪರ ಕ್ರಿಕೆಟ್ ಸ್ಟೇಡಿಯಂನಲ್ಲಿ ಎದುರಿಸಲಿದೆ. ಈಗಾಗಲೇ ಉಭಯ ತಂಡಗಳು ಗುವಾಹಟಿಯ ನೆಟ್​ನಲ್ಲಿ ಪ್ರ್ಯಾಕ್ಟೀಸ್ ಶುರು ಮಾಡಿದ್ದಾರೆ. ಭಾರತ-ಇಂಗ್ಲೆಂಡ್ ನಡುವಿನ ಅಭ್ಯಾಸ ಪಂದ್ಯವು ಮಧ್ಯಾಹ್ನ 2 ಗಂಟೆಗೆ ಶುರುವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ನೇರ ಪ್ರಸಾರ ವೀಕ್ಷಿಸಬಹುದು. ಹಾಗೆಯೆ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮ್ ಇರಲಿದೆ.

ಇಂದು ಎರಡು ಪಂದ್ಯಗಳು ನಡೆಯಲಿದೆ. ಮೊದಲ ಪಂದ್ಯದಲ್ಲಿ ಭಾರತ-ಇಂಗ್ಲೆಂಡ್ ಹಾಗೂ ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ-ನೆದರ್ಲೆಂಡ್ಸ್ ಮುಖಾಮುಖಿ ಆಗಲಿದೆ.

Join Whatsapp