ಬೆಂಗಳೂರಿಗರು ಮಾಡಿದ ಐಸ್ ಕ್ಯಾಂಡಿ ಇಡ್ಲಿ ಟ್ವಿಟ್ಟರಿನಲ್ಲಿ ಟ್ರೆಂಡಿಂಗ್ !

Prasthutha|

ಬೆಂಗಳೂರು: ಸಾಮಾನ್ಯವಾಗಿ ಗ್ರಾಹಕರನ್ನು ಸೆಳೆಯಲು ಹೋಟೆಲ್‍ ಗಳು ವಿವಿಧ ರೀತಿಯ ಐಡಿಯಾಗಳನ್ನು ಮಾಡುತ್ತವೆ. ಅದೇ ರೀತಿ ಬೆಂಗಳೂರಿನ ಹೋಟೆಲ್ ​ವೊಂದರಲ್ಲಿ ತಯಾರಾದ ಈ ಹೊಸ ಪ್ರಯೋಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

- Advertisement -

ಈ ಇಡ್ಲಿಯ ಫೋಟೋ ವನ್ನು ಮಹೀಂದ್ರಾ ಕಂಪನಿ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಟ್ವೀಟ್ ಮಾಡಿದ್ದು, ಬೆಂಗಳೂರು ಭಾರತದ ಇನೋವೇಶನ್ ಕ್ಯಾಪಿಟಲ್, ಹಲವು ಅನಿರೀಕ್ಷಿತ ವಲಯಗಳಲ್ಲಿ ಇದರ ಕ್ರಿಯೇಟಿವಿಟಿಯನ್ನು ತಡೆಯಲು ಎಂದಿಗೂ ಸಾಧ್ಯವಿಲ್ಲ.  ಐಸ್ ಕಡ್ಡಿಯ ಮೇಲೆ ಇಡ್ಲಿ, ಸಾಂಬಾರ್ ಹಾಗೂ ಚಟ್ನಿಯಲ್ಲಿ ಅದ್ದಿಕೊಂಡು ತಿನ್ನುವುದು. ಯಾರು ಇದರ ಪರವಾಗಿದ್ದೀರಿ, ಯಾರು ಇದರ ವಿರುದ್ಧವಾಗಿದ್ದೀರಿ ಎಂದು ಪ್ರಶ್ನಿಸಿದ್ದಾರೆ. 

ಹೀಗೆ ಪ್ರಶ್ನೆ ಕೇಳಿದ್ದೇ ತಡ, ಹಲವರು ವಿವಿಧ ರೀತಿಯಲ್ಲಿ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದು. ಪರ ವಿರೋಧದ ಚರ್ಚೆ ನಡೆಯುತ್ತಿದೆ.

Join Whatsapp