ಐಸಿಐಸಿಐ ಬ್ಯಾಂಕ್ ಸಾಲ ಪ್ರಕರಣ: ವಿಡಿಯೋಕಾನ್ ಅಧ್ಯಕ್ಷ ವೇಣುಗೋಪಾಲ್ ಧೂತ್ ಬಂಧನ

Prasthutha|

ನವದೆಹಲಿ: ಐಸಿಐಸಿಐ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋಕಾನ್ ಅಧ್ಯಕ್ಷ ವೇಣುಗೋಪಾಲ್ ಧೂತ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಸೋಮವಾರ ಬಂಧಿಸಿದೆ.

- Advertisement -

ಐಸಿಐಸಿಐ ಬ್ಯಾಂಕ್ ನ ಮಾಜಿ ಸಿಇಒ ಚಂದಾ ಕೊಚ್ಚಾರ್ ಮತ್ತು ಅವರ ಪತಿ ದೀಪಕ್ ಕೊಚ್ಚಾರ್ ಅವರನ್ನು ಖಾಸಗಿ ವಲಯದ ಬ್ಯಾಂಕ್ ಮುಖ್ಯಸ್ಥರಾಗಿದ್ದಾಗ ವಿಡಿಯೋಕಾನ್ ಗ್ರೂಪ್ ಗೆ ಒದಗಿಸಲಾದ ₹ 3,000 ಕೋಟಿಗೂ ಹೆಚ್ಚು ಸಾಲದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಸಿಬಿಐ ಮುಂಬೈ ವಿಶೇಷ ನ್ಯಾಯಾಲಯದಲ್ಲಿ ಹಾಜರುಪಡಿಸಿದ ಮೂರು ದಿನಗಳ ನಂತರ 71 ವರ್ಷದ ಧೂತ್ ಅವರನ್ನು ಮುಂಬೈನಿಂದ ಬಂಧಿಸಲಾಗಿದೆ.

59 ವರ್ಷದ ಚಂದಾ ಕೊಚ್ಚರ್ ಅವರು 2018 ರ ಅಕ್ಟೋಬರ್’ನಲ್ಲಿ ಐಸಿಐಸಿಐ ಬ್ಯಾಂಕ್’ನ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

- Advertisement -

ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ, ಆರ್ ಬಿಐ ಮಾರ್ಗಸೂಚಿಗಳು ಮತ್ತು ಬ್ಯಾಂಕಿನ ಸಾಲ ನೀತಿಯನ್ನು ಉಲ್ಲಂಘಿಸಿ ವೇಣುಗೋಪಾಲ್ ಧೂತ್ ಅವರ ಉತ್ತೇಜನದ ಮೇರೆಗೆ ವಿಡಿಯೋಕಾನ್ ಗ್ರೂಪ್’ನ ಕಂಪನಿಗಳಿಗೆ ಐಸಿಐಸಿಐ ಬ್ಯಾಂಕ್ 3,250 ಕೋಟಿ ರೂ.ಗಳ ಸಾಲ ಸೌಲಭ್ಯಗಳನ್ನು ಮಂಜೂರು ಮಾಡಿದೆ ಎಂದು ಸಿಬಿಐ ಆರೋಪಿಸಿದೆ.



Join Whatsapp