ರಾಮನಗರ: ಇದ್ರೀಷ್ ಪಾಷಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪುನೀತ್ ಕೆರೆಹಳ್ಳಿ ಸೇರಿದಂತೆ ಇತರೆ ನಾಲ್ಕು ಆರೋಪಿಗಳಿಗೆ 7 ದಿನಗಳ ಕಾಲ ಪೋಲಿಸ್ ಕಸ್ಟಡಿಗೆ ನೀಡಿ ಕನಕಪುರ JMFC ನ್ಯಾಯಾಲಯ ಆದೇಶ ಹೊರಡಿಸಿದೆ.
ಇದ್ರೀಶ್ ಪಾಷಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಹಿಂದುತ್ವ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮತ್ತು ನಾಲ್ವರು ಸಹಚರರನ್ನು ಇಂದು ಬೆಳಗ್ಗೆ ರಾಜಸ್ಥಾನದಿಂದ ರಾಮನಗರಕ್ಕೆ ಕರೆತಂದಿದ್ದು, ಬಳಿಕ ಪೊಲೀಸರು ಆರೋಪಿಗಳನ್ನು ಕನಕಪುರ ಜೆಎಂಎಫ್ಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ಹೆಚ್ಚಿನ ವಿಚಾರಣೆಗೆ ಆರೋಪಿಗಳನ್ನು 7 ದಿನಗಳ ಕಾಲ ಪೋಲಿಸ್ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ.
ಈ ಪ್ರಕರಣದ ಬಗ್ಗೆ ಇನ್ನಷ್ಟು ವಿಚಾರಣೆ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ತಮ್ಮ ಕಸ್ಟಡಿಗೆ ನೀಡಬೇಕೆಂದು ನ್ಯಾಯಾಲಕ್ಕೆ ಪೊಲೀಸರು ಮನವಿ ಮಾಡಿದ್ದರು. ಪೊಲೀಸ್ ಮನವಿ ಪುರಸ್ಕರಿಸಿದ ಕೋರ್ಟ್, ಆರೋಪಿಗಳನ್ನು ಏಳು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಆರೋಪಿಗಳ ಪರವಾಗಿ ಬೆಂಗಳೂರು ಮೂಲದ ಇಬ್ಬರು ವಕೀಲರು ವಕಾಲತ್ತು ವಹಿಸಿದ್ದರು.