ಇದ್ರೀಷ್ ಪಾಷಾ ಕೊಲೆ ಪ್ರಕರಣ| ಪುನೀತ್ ಕೆರೆಹಳ್ಳಿ ಸೇರಿದಂತೆ ಆರೋಪಿಗಳನ್ನು ಕರ್ನಾಟಕಕ್ಕೆ ಕರೆತಂದ ಪೊಲೀಸರು

Prasthutha|

ರಾಮನಗರ: ಇದ್ರೀಷ್ ಪಾಷಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾತನೂರು ಪೊಲೀಸರು ಕಾರ್ಯಾಚರಣೆ ನಡೆಸಿ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಆರೋಪಿಗಳನ್ನು ಏಪ್ರಿಲ್​ 05 ರಂದು ರಾಜಸ್ಥಾನದಲ್ಲಿ ಬಂಧಿಸಿದ್ದರು. ಈಗ ಪೊಲೀಸರು ಆರೋಪಿಗಳನ್ನು ಕನಕಪುರಕ್ಕೆ ಕರೆತಂದಿದ್ದು, ಇಂದು (ಏ.09) ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.

- Advertisement -

ಪುನೀತ್ ಕೆರೆಹಳ್ಳಿ, ಸುರೇಶ್ ಕುಮಾರ್, ಗೋಪಿ, ಪವನ್ ಕುಮಾರ್, ಪಿಲ್ಲಿಂಗ್ ಅಂಬಿಗಾರ್‌ ಬಂಧಿತ ಆರೋಪಿಗಳು.

ಎಫ್ಐಆರ್ ದಾಖಲಾಗಿದ್ದರೂ ಪೊಲೀಸರು ಆರೋಪಿಗಳನ್ನು ಬಂಧಿಸಿರಲಿಲ್ಲ. ಈ ನಡುವೆ ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿ ಬೆದರಿಕೆ ಹಾಕುವ ವೀಡಿಯೋವೊಂದನ್ನು ಕೂಡ ಹರಿಯಬಿಟ್ಟಿದ್ದ. ಆದರೂ ಪೊಲೀಸರು ಆತನನ್ನು ಬಂಧಿಸಿರಲಿಲ್ಲ. ಪ್ರಕರಣದ ಆರೋಪಿಯು ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಹಲವು ಬಿಜೆಪಿ ನಾಯಕರ ಜೊತೆ ಇರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಇದರಿಂದಾಗಿಯೇ ಪೊಲೀಸರು ಆರೋಪಿಗಳ ಬಂಧನಕ್ಕೆ ಹಿಂಜರಿಯುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು.

- Advertisement -

ನಂತರ ತಲೆಮರೆಸಿಕೊಂಡಿದ್ದ ಪುನೀತ್ ‌ಕೆರೆಹಳ್ಳಿ ಸೇರಿದಂತೆ ಒಟ್ಟು ಐವರು ರಾಜಸ್ಥಾನದಲ್ಲಿ ಬಂಧಿತರಾಗಿದ್ದರು.

ಘಟನೆ ಹಿನ್ನೆಲೆ

ಕನಕಪುರ ತಾಲೂಕಿನ ಸಾತನೂರು ಬಳಿ ಮಾ.31ರ ರಾತ್ರಿ ಮಂಡ್ಯದಿಂದ ಗೋವುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ವಾಹವವನ್ನು ಪುನೀತ್ ಕೆರೆಹಳ್ಳಿ ಹಾಗೂ ಸಂಗಡಿಗರು ತಡೆದಿದ್ದರು. ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಹಂಚಿಕೊಂಡಿದ್ದರು. ಈ ವೇಳೆ ಕ್ಯಾಂಟರ್​ನಲ್ಲಿದ್ದ ಚಾಲಕ ಹಾಗೂ ಮತ್ತೊಬ್ಬ ಪರಾರಿಯಾಗಿದ್ದರೆ, ವಾಹನದಲ್ಲಿದ್ದ ಇದ್ರೀಷ್ ಪಾಷ (Idrish Pasha) ಎಂಬುವರ ಮೃತ ದೇಹ ಘಟನೆ ನಡೆದ 200 ಮೀಟರ್ ದೂರದಲ್ಲಿ ಪತ್ತೆಯಾಗಿತ್ತು. ಪುನೀತ್ ಕೆರೆಹಳ್ಳಿ ನೈತಿಕ ಪೊಲೀಸ್ ಗಿರಿ ಮಾಡಿದ್ದು ಇದ್ರಿಷ್ ಪಾಷಾ ಅವರನ್ನು ಕೊಲೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ 3 ಎಫ್‍ಐಆರ್ ದಾಖಲಾಗಿತ್ತು. ಮೃತನ ಸಹೋದರನ ದೂರಿನಂತೆ ದೂರಿನಂತೆ ಪೊಲೀಸರು ಐಪಿಸಿ ಸೆಕ್ಷನ್ 341, 504, 506, 324, 302, 34ರ ಅಡಿ ಪ್ರಕರಣ ದಾಖಲಾಗಿತ್ತು.



Join Whatsapp