Home ರಾಜ್ಯ 4 ಮಕ್ಕಳು ಹೆತ್ತರೆ 1 ಲಕ್ಷ ರೂ. ಬಹುಮಾನ: ಕೊಡವ ಸಮಾಜದ ಆಫರ್

4 ಮಕ್ಕಳು ಹೆತ್ತರೆ 1 ಲಕ್ಷ ರೂ. ಬಹುಮಾನ: ಕೊಡವ ಸಮಾಜದ ಆಫರ್

ಮಡಿಕೇರಿ: ಕೊಡಗಿನಲ್ಲಿ ಕೊಡವ ಕುಟಂಬ ಉಳಿಸಲು ವಿಶಿಷ್ಟ ಪ್ರಯತ್ನವೊಂದನ್ನು ಕೈಗೊಳ್ಳಲಾಗಿದೆ. ಮನೆ ತುಂಬಾ ಮಕ್ಕಳು ಮಾಡುವ ಪೋಷಕರಿಗೆ 25 ಸಾವಿರ ರೂ.ದಿಂದ ಒಂದು ಲಕ್ಷ ರೂ. ದವರೆಗೆ ಬಹುಮಾನ ನೀಡಲಾಗುತ್ತಿದೆ.

ಕೊಡಗು ಜಿಲ್ಲೆ ಅತಿ ವಿಶಿಷ್ಟ ಸಂಸ್ಕೃತಿ ಪದ್ಧತಿ ಪರಂಪರೆಗೆ ಹೆಸರಾದ ಜಿಲ್ಲೆ. ಇಲ್ಲಿನ ಕೊಡವ ಸಂಸ್ಕೃತಿ ವಿಶ್ವ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ಹಾಗಾಗಿಯೇ ಸಾಂಸ್ಕೃತಿಕವಾಗಿ ಕೊಡಗು ಜಿಲ್ಲೆ ಅತಿಸೂಕ್ಷ್ಮ ಪ್ರದೇಶ ಅಂತಾನೇ ಪರಿಗಣಿತವಾಗಿದೆ. ಆದರೆ ಇತ್ತೀಚಿನ ವರ್ಷಗಳಿಂದ ಕೊಡವರು ಸಾಂಸ್ಕೃತಿಕವಾಗಿ ಅದಃಪತನದತ್ತ ಸಾಗುತ್ತಿದ್ದಾರೆ ಅನ್ನೋ ಆತಂಕ ಜನರನ್ನ ಕಾಡುತ್ತಿದೆ. ಎಲ್ಲರೂ ತಮ್ಮ ಉದ್ಯೋಗಕ್ಕಾಗಿ ದೂರದ ಊರಿಗೆ ತೆರಳಿ ಅಲ್ಲೇ ಜೀವನ ಮಾಡುತ್ತಿದ್ದಾರೆ. ಜೊತೆಗೆ ಒಂದೇ ಮಗು ಸಾಕು ಅಂತ ನಿರ್ಬಂಧ ಹಾಕಿಕೊಳ್ಳುತ್ತಿದ್ದಾರೆ.

ಜಿಲ್ಲೆಯ ಹಬ್ಬ ಹರಿದಿನಗಳಿಗೆ ಬರುವ ಕೊಡವರ ಸಂಖ್ಯೆ ಗಣನೀಯವಾಗಿ ಕಡಿಮೆ ಆಗುತ್ತಿದೆ. ಪರಿಸ್ಥಿತಿ ಹೀಗೇ ಮುಂದುವರೆದರೆ ಮುಂದೊಂದು ದಿನ ಕೊಡವರು ಬೆರಳೆಣಿಕೆ ಸಂಖ್ಯೆಗೆ ಇಳಿದರೂ ಅಚ್ಚರಿ ಇಲ್ಲ. ಹಾಗಾಗಿ ಜಿಲ್ಲೆಯ ವಿವಿಧ ಊರುಗಳಲ್ಲಿರುವ ಕೊಡವ ಸಮಾಜಗಳು ತಮ್ಮ ಜನಾಂಗಕ್ಕೆ ಹೆಚ್ಚು ಹೆಚ್ಚು ಮಕ್ಕಳನ್ನ ಮಾಡಿಕೊಳ್ಳುವಂತೆ ಆಫರ್ ನೀಡಿದೆ.

ಪೊನ್ನಂಪೇಟೆ ತಾಲ್ಲೂಕಿನ ಟಿ ಶೆಟ್ಟಿಗೇರಿ ಕೊಡವ ಸಮಾಜ ಈ ವಿಶಿಷ್ಟ ಆಫರ್ ನೀಡಿದೆ. ಯಾವ ಕೊಡವ ಕುಟುಂಬದ ಮೂರು ಮಕ್ಕಳಿಗೆ ಜನ್ಮ ನೀಡುವ ಪೋಷಕರಿಗೆ ಅವರಿಗೆ 50 ಸಾವಿರ ರೂ ಬಹುಮಾನ, 4 ಮಕ್ಕಳು ಮಾಡಿಕೊಳ್ಳುವ ಪೋಷಕರಿಗೆ 1 ಲಕ್ಷ ರೂ ಬಹುಮಾನ ನೀಡುವುದಾಗಿ ಘೋಷಿಸಲಾಗಿದೆ. ಈ ಹಣವನ್ನ ಆ ಮಗುವಿನ ಹೆಸರಲ್ಲಿ ಬ್ಯಾಂಕ್​ನಲ್ಲಿ ಡಿಪಾಸಿಟ್ ಇಟ್ಟು 18 ವರ್ಷ ತುಂಬಿದ ಬಳಿಕ ನೀಡುವುದಾಗಿ ಪ್ರಕಟಿಸಲಾಗಿದೆ.

Join Whatsapp
Exit mobile version