Home ಟಾಪ್ ಸುದ್ದಿಗಳು ಕೊಡಗಿನಲ್ಲಿ ಏನಾದರೂ ಅನಾಹುತವಾದರೆ ಅದಕ್ಕೆ ಸಿದ್ದರಾಮಯ್ಯರೇ ಜವಾಬ್ದಾರಿ: ಯಡಿಯೂರಪ್ಪ

ಕೊಡಗಿನಲ್ಲಿ ಏನಾದರೂ ಅನಾಹುತವಾದರೆ ಅದಕ್ಕೆ ಸಿದ್ದರಾಮಯ್ಯರೇ ಜವಾಬ್ದಾರಿ: ಯಡಿಯೂರಪ್ಪ

ಮೈಸೂರು: ಸಿದ್ದರಾಮಯ್ಯ ಮೊಟ್ಟೆ ಎಸೆತ ಪ್ರಕರಣವನ್ನು ನೆಪ ಮಾಡಿಕೊಂಡು ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮೈಸೂರಿನಲ್ಲಿ ಹೇಳಿದ್ದಾರೆ.

ಮೊಟ್ಟೆಯನ್ನು ಯಾರೇ ಎಸೆದಿದ್ದರೂ ಅದು ತಪ್ಪೇ. ಆದರೆ ಅದನ್ನೇ ನೆಪ ಮಾಡಿಕೊಂಡು ಪಾದಯಾತ್ರೆ ಹಮ್ಮಿಕೊಂಡಿದ್ದು ಕೂಡ ತಪ್ಪು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸ್ವತಃ ಮುಖ್ಯಮಂತ್ರಿ ಹೇಳಿದ ಮೇಲೂ ಈ ರೀತಿ ಹಠಕ್ಕೆ ಬಿದ್ದಿರುವುದು ಸರಿಯಲ್ಲ. ಇನ್ನು ಮುಂದಾದರೂ ಸಿದ್ದರಾಮಯ್ಯ ಅವರು ಶಾಂತ ರೀತಿಯಿಂದ ವರ್ತಿಸಲಿ. ಇದನ್ನು ಮೀರಿಯೂ ಪಾದಯಾತ್ರೆ ನಡೆಸಿದರೆ ಕೊಡಗಿನಲ್ಲಿ ಲಕ್ಷಾಂತರ ಮಂದಿ ಸೇರುತ್ತಾರೆ. ಏನಾದರೂ ಅನಾಹುತವಾದರೆ ಅದಕ್ಕೆ ಸಿದ್ದರಾಮಯ್ಯರೇ ಜವಾಬ್ದಾರರಾಗುತ್ತಾರೆ ಎಂದು ಹೇಳಿದರು.

ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಎಂದು ಸಿದ್ದರಾಮಯ್ಯ ಟೀಕಿಸುತ್ತಿರುವುದು ಸರಿಯಲ್ಲ. ಯಾರಿಗೆ ಧರ್ಮ, ದೇಶದ ಪರಿಕಲ್ಪನೆ ಇರುವುದಿಲ್ಲವೋ ಅಂತಹವರು ಈ ರೀತಿ ಬೇಜವಾಬ್ದಾರಿತನದಿಂದ ಮಾತಾಡ್ತಾರೆ. ಸಾವರ್ಕರ್ ಕುರಿತು ಸಿದ್ದರಾಮಯ್ಯ ನೀಡುತ್ತಿರುವ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಸಿದ್ದರಾಮಯ್ಯ ಇದೇ ರೀತಿ ಮುಂದುವರಿದರೆ ರಾಜ್ಯದ ಜನರು ತಕ್ಕ ಪಾಠ ಕಲಿಸಲಿದ್ದಾರೆ. ಆ ಕಾಲ ಬಹಳ ದೂರವಿಲ್ಲ. ಸಾವರ್ಕರ್ ಅವರ ದೇಶಭಕ್ತಿಯನ್ನು ಜನರಿಗೆ ಸಾರುವ ಸಲುವಾಗಿ ರಥಯಾತ್ರೆ ನಡೆಸುತ್ತಿದ್ದೇವೆ. ಹೆಚ್ಚಿನ ಜನರನ್ನು ಸೇರಿಸಿ ರಥಯಾತ್ರೆ ನಡೆಸುತ್ತೇವೆ. ಶಾಂತಿಯುತವಾಗಿ ರಥಯಾತ್ರೆ ನಡೆಸುತ್ತೇವೆ ಎಂದು ಹೇಳಿದರು.

Join Whatsapp
Exit mobile version