ಅಪ್ಪಾಜಿಗೆ ಪಾಲಿಟಿಕ್ಸ್​ ಬೇಡದಿದ್ದರೆ ನನಗೆ ಯಾಕೆ ಬಂಗಾರಪ್ಪನ ಮಗಳನ್ನು ತರುತ್ತಿದ್ದರು?: ಶಿವರಾಜ್ ಕುಮಾರ್

Prasthutha|

ಬೆಂಗಳೂರು: ಸಾಕಷ್ಟು ಜನರು ಏನೇನೋ ಕೇಳಬಹುದು. ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದು ಬೇಡ. ಅಪ್ಪಾಜಿಗೆ ರಾಜಕೀಯ ಆಗುತ್ತಿರಲಿಲ್ಲ ಎಂದು ಕೆಲವರು ಹೇಳುತ್ತಾರೆ. ಅದು ನಿಜ ಇಲ್ಲ. ಯಾವುದೇ ಸಮಾರಂಭ ಆಗಲಿ, ಯಾವುದೇ ಮುಖ್ಯಮಂತ್ರಿ ಆಗಲಿ, ಮೊದಲು ನಮ್ಮ ಮನೆಗೆ ಬಂದು ಅಪ್ಪಾಜಿ ಜೊತೆ ಮಾತಾಡುತ್ತಿದ್ದರು. ಅಪ್ಪಾಜಿಗೂ ಪಾಲಿಟಿಕ್ಸ್​ ಬೇಕು, ರಾಜಕೀಯದ ವ್ಯಕ್ತಿಗಳು ಬೇಕು. ಇಲ್ಲಾಂದ್ರೆ ನನಗೆ ಯಾಕೆ ಬಂಗಾರಪ್ಪನ ಮಗಳನ್ನು ತರುತ್ತಿದ್ದರು ಹೇಳಿ? ಅವರು ರಾಜಕೀಯವನ್ನು ಯಾವಾಗಲೂ ತಪ್ಪು ಎಂದು ಹೇಳಿಲ್ಲ ಎಂದು ಕನ್ನಡ ಸಿನೆಮಾ ನಟ ಶಿವರಾಜ್ ಕುಮಾರ್ ಹೇಳಿದ್ದಾರೆ.

- Advertisement -

ಅವರು ಪತ್ನಿ ಗೀತಾ ಶಿವರಾಜ್ ಕುಮಾರ್ ಲೋಕಸಭೆಗೆ ಸ್ಪರ್ಧಿಸುವುದರ ಬಗ್ಗೆ ತಮ್ಮ ಮನೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಅಪ್ಪಾಜಿಗೆ ವೈಯಕ್ತಿಕವಾಗಿ ರಾಜಕೀಯ ಆಗುತ್ತಿರಲಿಲ್ಲ ಅಷ್ಟೇ. ತಮ್ಮ ಕೆಲಸ ನಟನೆ ಎಂದೇ ಹೇಳಿದ್ದರು. ನನಗೂ ರಾಜಕೀಯಕ್ಕೆ ಬನ್ನಿ ಎಂದು ಕೆಲವರು ಕರೆದಿದ್ದರು. ನನಗೆ ಬೇಡ ಅಂದೆ. ಅಪ್ಪಾಜಿ ನನಗೆ ಕೊಟ್ಟ ಬಳುವಳಿ ಸಿನಿಮಾ. ಆದರೆ ಗೀತಾಗೆ ಹಾಗಲ್ಲ. ಅವರ ತಂದೆಯ ರಕ್ತ ರಾಜಕೀಯ. ಅದೊಂದು ಜವಾಬ್ದಾರಿ ಅವರಿಗೆ ಇದೆ. ಬರೀ ಗಂಡಸರಿಗೆ ಮಾತ್ರ ಜವಾಬ್ದಾರಿ ಇರಬೇಕಾ? ಕರ್ನಾಟಕದ ಮಹಿಳೆಯರು ರಾಜಕೀಯದಲ್ಲಿ ಕಡಿಮೆ ಇದ್ದಾರೆ. ಈಗ ಹೆಣ್ಮಕ್ಕಳೇ ಸ್ಟ್ರಾಂಗ್ ಗುರು ಎಂದು ಶಿವರಾಜ್​ಕುಮಾರ್ ಪತ್ನಿಯ ಚುನಾವಣಾ ಸ್ಪರ್ಧೆಯನ್ನು ಸಮರ್ಥಿಸಿದ್ದಾರೆ.​

- Advertisement -

ಇವತ್ತು ಒಂದು ಪರಿಪೂರ್ಣತೆ ಕಾಣಿಸುತ್ತಿದೆ. ಸಿನಿಮಾ ಇಂಡಸ್ಟ್ರಿ ಒಂದು ಕುಟುಂಬ ಎಂದು ಅಪ್ಪಾಜಿ ಹೇಳುತ್ತಾ ಇರುತ್ತಾರೆ. ನಟರು, ನಿರ್ದೇಶಕರು, ನಿರ್ಮಾಪಕರು ಮಾತ್ರವಲ್ಲ. ಚಿತ್ರರಂಗ ಎಂದರೆ ಪ್ರದರ್ಶಕರು, ವಿತರಕರು ಕೂಡ ಬರುತ್ತಾರೆ. ಎಲ್ಲರೂ ಸೇರಿ ಕುಟುಂಬ ಆಗುತ್ತದೆ. ಆ ಇಡೀ ಕುಟುಂಬ ಇವತ್ತು ಗೀತಾ ಪರವಾಗಿ ನಿಂತಿದೆ. ಇದರಿಂದ ನಮಗೆ ಹೆಮ್ಮೆ ಆಗುತ್ತದೆ. ಇದಕ್ಕೆ ನಾವು ಧನ್ಯ ಎಂದು ಶಿವರಾಜ್​ಕುಮಾರ್ ಹೇಳಿದ್ದಾರೆ.

Join Whatsapp