Home ಟಾಪ್ ಸುದ್ದಿಗಳು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ರಾಜ್ಯ ಸಚಿವರ ತಲೆದಂಡ: ಪರಮೇಶ್ವರ್

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ರಾಜ್ಯ ಸಚಿವರ ತಲೆದಂಡ: ಪರಮೇಶ್ವರ್

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲಾದರೆ ರಾಜ್ಯದ ಸಚಿವರನ್ನು ತಲೆದಂಡ ಮಾಡುವ ಎಚ್ಚರಿಕೆಯನ್ನು ಹೈಕಮಾಂಡ್ ನೀಡಿದ್ದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.


ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎರಡು ಮೂರು ದಿನಗಳಲ್ಲಿ ರಣದೀಪ್ ಸಿಂಗ್ ಸುರ್ಜೇವಾಲ ರಾಜ್ಯಕ್ಕೆ ಬರಬಹುದು. ಅಭ್ಯರ್ಥಿಗಳ ಬಗ್ಗೆ ಅಥವಾ ಸಚಿವರ ಸ್ಪರ್ಧೆ ವಿಚಾರವಾಗಿ ಮಾತಾಡಿಲ್ಲ.

ಜವಾಬ್ದಾರಿ ತೆಗೆದುಕೊಂಡು ಪ್ರಚಾರ ಮಾಡಿ ಅಂತ ಹೇಳಿದ್ದಾರೆ. ಸಚಿವರ ತಲೆದಂಡ ಅನ್ನೋದನ್ನೂ ಹೇಳಿದ್ದಾರೆ. ಗೆಲ್ಲುವ ಕ್ಷೇತ್ರದಲ್ಲಿ ಸೋತರೆ ಸರಿಯಾಗಿ ಕೆಲಸ ಮಾಡಿಲ್ಲ ಅಂತ ತಿಳಿದುಕೊಳ್ಳಬೇಕಾಗುತ್ತದೆ ಅಂತ ಹೇಳಿದ್ದಾರೆ. ನೀವೆಲ್ಲ ಗಂಭೀರವಾಗಿ ಪರಿಗಣಿಸಬೇಕು. ಇಲ್ಲಾಂದರೆ ಕಷ್ಟ ಆಗುತ್ತೆ ಅಂತ ಹೇಳಿದ್ದಾರೆ ಎಂದರು.

Join Whatsapp
Exit mobile version