ಬೆಂಗಳೂರು: ರಾಜ್ಯದಲ್ಲಿ 23ರಿಂದ 9,10 ಮತ್ತು ಪಿಯುಸಿ ತರಗತಿಗಳು ಆರಂಭವಾಗುತ್ತಿದ್ದು, ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾದರೆ ಶಾಲೆಗಳನ್ನು ಬಂದ್ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾದರೆ ಶಾಲೆಗಳನ್ನು ಬಂದ್ ಮಾಡಲಾಗುವುದು. ಸದ್ಯ ಕೊರೋನಾ ಸೋಂಕಿನ ಪ್ರಕರಣಗಳು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳನ್ನು ಓಪನ್ ಮಾಡಲಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ ಸುಮಾರು ಶೇ. 1 ರಷ್ಟಿದೆ. ಕೇರಳ, ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದು, ನಮ್ಮ ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾದರೆ ಶಾಲೆಗಳನ್ನು ಬಂದ್ ಮಾಡಲಾಗುವುದು. ಸಿಎಂ ಜೊತೆಗೆ ಚರ್ಚೆ ನಡೆಸಿ ಶಾಲೆ ಬಂದ್ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.