ಇಂದಿನಿಂದ ಎರಡು ದಿನಗಳ ಕಾಲ ದ.ಕ ಜಿಲ್ಲೆ ಸೇರಿ ರಾಜ್ಯದ ಹಲವೆಡೆ ಮಳೆ ಸಾಧ್ಯತೆ

- Advertisement -

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನಿಂದಾಗಿ ಜನತೆ ಈಗಾಗಲೇ ತತ್ತರಿಸಿ ಹೋಗಿದ್ದಾರೆ. ದಿನದಿಂದ ದಿನಕ್ಕೆ ಬಿಸಿಲಿನ ಬೇಗೆ ಕೂಡಾ ಹೆಚ್ಚಾಗುತ್ತಿದ್ದು, ಮಳೆ ಯಾವಾಗ ಬರುತ್ತದೆ ಎಂದು ಜನ ಕಾದು ಕುಳಿತಿದ್ದಾರೆ. ಇದೀಗ ರಾಜ್ಯದಲ್ಲಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಗುಡ್‌ ನ್ಯೂಸ್‌ ಕೊಟ್ಟಿದೆ. ಮುಂದಿನ ಎರಡು ದಿನಗಳ ಕಾಲ ಸಾಕಷ್ಟು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

ಕರ್ನಾಟಕದ ಉತ್ತರ ಒಳನಾಡು, ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಿತ್ತು. ಕಳೆದ ಎರಡು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದ್ದು ಸ್ವಲ್ಪ ತಂಪೆನಿಸಿದರೂ ಕಾದ ಭೂಮಿಗೆ ನೀರು ಬಿದ್ದು ಧಗೆ ಎದ್ದಿದೆ. ಮತ್ತೆ ಸೆಕೆ ಶುರುವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ಇಂದು ಮತ್ತು ನಾಳೆ ರಾಜ್ಯದ ಬಹುತೇಕ ಕಡೆಗಳಲ್ಲಿ ಪೂರ್ವ‌ ಮುಂಗಾರು ಅಬ್ಬರಿಸುವ ಸಾಧ್ಯತೆ ಇದೆ. ಪ್ರಬಲ ಗಾಳಿ, ಗುಡುಗು, ಮಿಂಚು ಕೂಡ ಇರುವ ಮುನ್ಸೂಚನೆ ಸಿಕ್ಕಿದೆ. ಕರ್ನಾಟಕದಲ್ಲಿ ಇನ್ನೆರಡು ದಿನ ಸಂಜೆ ವೇಳೆಗೆ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೇ ಕೆಲವೆಡೆ ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಇರಲಿದೆ. ಎರಡು ದಿನದ ಬಳಿಕ ರಾಜ್ಯದಲ್ಲಿ ಮಳೆಯ ಕ್ರಮೇಣ ಕಡಿಮೆ ಆಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

- Advertisement -


Must Read

Related Articles